Advertisement
ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಅಜಾತಶತ್ರು ಬಿ. ಅಪ್ಪಣ್ಣ ಹೆಗ್ಡೆ ಅವರ 90ರ ಹುಟ್ಟು ಹಬ್ಬವನ್ನು ಸಂಭ್ರಮವನ್ನಾಗಿಸುವ ಕಲ್ಪನೆಯೊಂದಿಗೆ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ. ಇದೊಂದು ವಿಭಿನ್ನ ಹಾಗೂ ದಾಖಲೆಯಾಗಿ ಉಳಿಯಬೇಕು ಅನ್ನುವ ಸದುದ್ದೇಶದಿಂದ ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಂಗಳೂರು, ಬ್ರಹ್ಮಾವರ, ಬೈಂದೂರು, ಮುಂಬಯಿ, ಕುಂದಾಪುರ ಸಹಿತ ಹಲವು ಕಡೆ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದವರು ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ. 24ರ ಸಂಜೆ 6.30ರ ಸಭಾ ಕಾರ್ಯಕ್ರಮದಲ್ಲಿ ಅಪ್ಪಣ್ಣ ಹೆಗ್ಡೆಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೆಂದ್ರ ಹೆಗ್ಗಡೆ ಅವರು ಸಾರ್ವಜನಿಕ ಗೌರವ ಸಮರ್ಪಿಸಲಿದ್ದಾರೆ. ವಿಶ್ರಾಂತ ಕುಲಪತಿ ಡಾ| ಬಿ. ಎ. ವಿವೇಕ ರೈ ಅವರಿಗೆ ಬಸ್ರೂರುಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅವಿಭಜಿತ ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ, ಅಶಕ್ತರಿಗೆ ನೆರವು ಹಸ್ತಾಂತರ ನಡೆಯಲಿದೆ. ಬಳಿಕ ಉಪವೇದಿಕೆಯಲ್ಲಿ ಸಮ್ಮಾನ, ಶುಭಾಶಯ, ಅಭಿನಂದನೆಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
Related Articles
Advertisement
ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ರಾಮ್ಕಿಶನ್ ಹೆಗ್ಡೆ, ಸಮಿತಿಯ ಉದಯ್ ಪಡುಕರೆ, ವಸಂತ ಗಿಳಿಯಾರು ಉಪಸ್ಥಿತರಿದ್ದರು.
ವರ್ಷವಿಡೀ ಸಮಾಜಮುಖಿ ಕಾರ್ಯಕ್ರಮಈ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಅನ್ನುವ ನೆಲೆಯಲ್ಲಿ ವರ್ಷವಿಡೀ ಹತ್ತಾರು ಸಮಾಜಮುಖೀ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವ ಉದ್ದೇಶವಿದೆ. 90 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ದೇವವೃಕ್ಷ ಅಭಿಯಾನ, ಗ್ರಾಮೀಣ ಪ್ರದೇಶದಲ್ಲಿ ರಂಗ ಮಂಟಪ ನಿರ್ಮಾಣ ಸಹಿತ ಹಲವು ಜನಪರ ಕಾರ್ಯಕ್ರಮ ಚಿಂತನೆಯಿದೆ. ಈಗಾಗಲೇ ಗೋಳಿಹೊಳೆಯ ಎಲ್ಲೂರಿನಲ್ಲಿ ಕಂಬಳ ಹಾಗೂ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಡಾ| ಮೋಹನ್ ಆಳ್ವ ತಿಳಿಸಿದರು.