ಕಾಪು: ಬೆಳಪು ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಸೋಲಾರ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಕಳ್ಳನನ್ನು ಗ್ರಾ.ಪಂ. ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮುಂಜಾನೆ ಪಣಿಯೂರರಿನಲ್ಲಿ ನಡೆದಿದೆ.
ಹಳೇ ಆರೋಪಿ, ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿ, ಹೊರ ಬಂದಿರುವ ಕಳತ್ತೂರು ನಿವಾಸಿ ಕಿರಣ್ ಬ್ಯಾಟರಿ ಕಳವು ಮಾಡಿ ಸಿಕ್ಕಿಬಿದ್ದಿದ್ದನೆ.
ಶುಕ್ರವಾರ ಮುಂಜಾನೆ 5 ಗಂಟೆಯ ವೇಳೆ ಪಣಿಯೂರು ಪಟೇಲ್ ರಸ್ತೆ ಬಳಿಯ ಸೋಲಾರ್ ಲೈಟ್ ಕಂಬದ ಬ್ಯಾಟರಿಗಳನ್ನು ಕಳವು ಮಾಡುತ್ತಿರುವಾಗಲೇ, ಗಮನಿಸಿದ ಸ್ಥಳೀಯ ಗ್ರಾ.ಪಂ. ಕಾರ್ಯಪಡೆಯ ಯುವಕರು ಕಳ್ಳನನ್ನು ಸಿನೀಮಿಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ
ಈ ಬಗ್ಗೆ ಕೂಡಲೇ ಗ್ರಾ.ಪಂ. ಕಾರ್ಯಪಡೆಯ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಅವರಿಗೆ ಯುವಕರು ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಬಂದ ಅವರು ಶಿರ್ವ ಪೊಲೀಸರಿಗೆ ಮಾಹಿತಿ ನೀಡಿದರು. ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಬೆಳಪು ಗ್ರಾಮ ಪಂಚಾಯತ್ ಗ್ರಾಮೀಣ ಕಾರ್ಯಪಡೆಯ ಸದಸ್ಯರಾದ ಸುದರ್ಶನ ಪೂಜಾರಿ, ಗಣೇಶ್ ಪೂಜಾರಿ, ಯೋಗೀಶ್ ಪೂಜಾರಿ, ಸುಜಿತ್ ಕುಮಾರ್, ಅನಿಲ್ ಕುಮಾರ್, ರಾಮ್ ಪ್ರಕಾಶ್ ಶೆಟ್ಟಿ ಮೊದಲಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.