Advertisement

Karnataka: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅವ್ಯವಹಾರ ತನಿಖೆ

11:19 PM Feb 14, 2024 | Team Udayavani |

ಬೆಂಗಳೂರು: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ 2022-23ನೇ ಸಾಲಿನಲ್ಲಿ ಸರಕಾರದ ಅನುಮೋದನೆ ಇಲ್ಲದಿದ್ದರೂ 362 ಕೋಟಿ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಸರಕಾರ ಹೇಳಿದೆ.

Advertisement

ಕಾಂಗ್ರೆಸ್‌ನ ಎಂ.ಎಲ್‌. ಅನಿಲ್‌ಕುಮಾರ್‌ ನಿಯಮ 72ರಡಿ ಪ್ರಸ್ತಾಪಿಸಿದ ವಿಷಯಕ್ಕೆ ಯೋಜನಾ ಸಚಿವರ ಪರವಾಗಿ ಉತ್ತರ ನೀಡಿದ ಸಭಾನಾಯಕ ಎನ್‌.ಎಸ್‌. ಬೋಸರಾಜ್‌, ಈಗಾಗಲೇ ಮಂಡಳಿಯ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ವಿಷಯ ನಿರ್ವಾಹಕರನ್ನು ಅಮಾನತುಗೊಳಿಸಿ, ಅವರನ್ನು ಮಂಡಳಿಯ ಹುದ್ದೆಗಳಿಂದ ಬಿಡುಗಡೆ ಮಾತೃ ಇಲಾಖೆಗಳಿಗೆ ಅವರ ಸೇವೆಯನ್ನು ಹಿಂದಿರುಗಿಸಲಾಗಿದೆ. ಮುಂದುವರಿದು, ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡ ಳಿಗೆ 2022-23ನೇ ಸಾಲಿನಲ್ಲಿ ಮಂಡಳಿ ವ್ಯಾಪ್ತಿಗೆ ಬರುವ ವಿಧಾನಸಭೆ ಮತ್ತು ವಿಧಾನಪರಿಷತ್ತಿನ 99 ಶಾಸಕರಿಗೆ ತಲಾ 1 ಕೋಟಿ ಅನುದಾನ ಹಂಚಿಕೆ ಮಾಡಿ, 99 ಕೋಟಿ ರೂ.ಗಳ ಕ್ರಿಯಾ ಯೋಜನೆಗಳಿಗೆ ಸರಕಾರದ ಅನುಮೋದನೆ ನೀಡಲಾಗಿತ್ತು. ಆದರೆ, ಕಾರ್ಯದರ್ಶಿ ಮಂಡಳಿ ಹಂತದಲ್ಲಿ ನಿರ್ಣಯ ಕೈಗೊಂಡು ಸರಕಾರದ ಅನುಮೋದನೆ ಇಲ್ಲದೆ 362.53 ಕೋಟಿ ರೂ.ಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರು. ವಿಷಯ ಗೊತ್ತಾಗಿ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next