Advertisement

ಬಿ.ಬಿ.ಶಿವಪ್ಪ ಆರೋಗ್ಯ ಸ್ಥಿತಿ ಗಂಭೀರ

07:35 AM Jul 30, 2017 | Team Udayavani |

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಶಾಸಕ ಬಿ.ಬಿ.ಶಿವಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಗರದ
ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಬಳಲು ತ್ತಿರುವ ಶಿವಪ್ಪ ಒಂದು ವಾರದಿಂದ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.88 ವಯಸ್ಸಿನ ಶಿವಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರು ಆಗಾಗ್ಗೆ ಉಸಿರಾಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳುತ್ತಿದ್ದರು. ಈ ಬಾರಿ ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
 

Advertisement

Udayavani is now on Telegram. Click here to join our channel and stay updated with the latest news.

Next