Advertisement

ಕೋವಿಡ್ ಸ್ವ್ಯಾಬ್ ಸಂಗ್ರಹಣೆಗೆ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಬಳಸಲು ಪಾಲಿಕೆ ನಿರ್ಧಾರ

06:30 PM Aug 01, 2020 | sudhir |

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಪರೀಕ್ಷೆಗೆ ಗಂಟಲು ದ್ರವ (ಸ್ವ್ಯಾಬ್) ಸಂಗ್ರಹಣೆಗೆ ಸಿಬ್ಬಂದಿ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

Advertisement

ಈ ಕಾರ್ಯಕ್ಕೆ ನಗರದಲ್ಲಿನ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಸೂಕ್ತ ಸುರಕ್ಷತಾ ಕ್ರಮ ಅನುಸರಿಸಿ, ಸ್ವ್ಯಾಬ್ ಸಂಗ್ರಹಣೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಅವರಿಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಪತ್ರ ಬರೆದಿದ್ದಾರೆ.

ಸ್ವ್ಯಾಬ್ ಸಂಗ್ರಹಣಾ ಘಟಕಗಳನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೆ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಕಾಲೇಜುಗಳಿಂದ ನಿಯೋಜಿಸುವಂತೆ ಕೋರಿದ್ದು,  ಸ್ವ್ಯಾಬ್ ಸಂಗ್ರಹಣೆಗೆ ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಮಾಸಿಕ 14 ಸಾವಿರ ರೂ. ಗೌರವಧನ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳು ವಾಸವಿರುವ ವಾರ್ಡ್‍ಗಳಲ್ಲಿಯೇ ಈ ಸೇವೆಗೆ ಬಳಸಿಕೊಳ್ಳಲಾಗುವುದು.

ಸ್ಥಳೀಯ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ವಾಹನ ವ್ಯವಸ್ಥೆ ಸಹ ಇರಲಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next