Advertisement
ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಷಿಕ 5,500 ಟನ್‌ಗೂ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಶೇ. 80 ಭಾಗ ಹಸಿ ತ್ಯಾಜ್ಯವಾಗಿದ್ದು, 1,500 ಟನ್‌ಗೂ ಕಡಿಮೆ ಪ್ರಮಾಣದಲ್ಲಿ ಹಸಿ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಉಳಿದ ತ್ಯಾಜ್ಯವನ್ನು ಭೂಭರ್ತಿ ಪ್ರದೇಶಗಳಲ್ಲಿ ಸುರಿಯಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಬಿಬಿಎಂಪಿ ಮಾತ್ರ ಹಸಿ, ಒಣ ಹಾಗೂ ಸ್ಯಾನಿಟರಿ ತ್ಯಾಜ್ಯ ವಿಂಗಡಣೆ ಮಾಡುವ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ.
Related Articles
Advertisement
ಸ್ವಚ್ಛ ಸರ್ವೇಕ್ಷಣ್‌ಗೆ ಒತ್ತು: ತ್ಯಾಜ್ಯ ವಿಂಗಡಣೆಯ ಜತೆಗೆ ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಬಗ್ಗೆಯೂ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತದೆ. ಪ್ರಮುಖವಾಗಿ 100 ದಿನಗಳೊಳಗಾಗಿ ತ್ಯಾಜ್ಯ ವಿಂಗಡಣೆ, ನಿರ್ವಹಣೆ ಸೇರಿ ಇನ್ನಿತರ ವಿಷಯಗಳ ಕುರಿತಂತೆ 10ರಿಂದ 15 ಲಕ್ಷ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಸ್ವಚ್ಛ ಭಾರತ ಮೊಬೈಲ್ ಆ್ಯಪ್, ಗೋಡೆಗಳ ಮೇಲೆ ಚಿತ್ರ ಬಿಡಿಸುವುದು, ಕೊಳಗೇರಿ ಮತ್ತು ಕೈಗಾರಿಕ ಪ್ರದೇಶಗಳಲ್ಲಿ ಈ ಕುರಿತು ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಹೊಸಗುತ್ತಿಗೆದಾರರು ನೇಮಕವಾಗಬೇಕು: ಬಿಬಿಎಂಪಿ 198 ವಾರ್ಡ್‌ಗಳಲ್ಲಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗೆ ಗುತ್ತಿಗೆದಾರರು ನೇಮಕವಾಗಬೇಕಿದೆ. ಈ ಕುರಿತು ಟೆಂಡರ್ ಪ್ರಕ್ರಿಯೆ ನಡೆಸಲು ಬಿಬಿಎಂಪಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ ಮೂಲಕ ಗುತ್ತಿಗೆ ಕರೆಯಲಾಗುತ್ತಿದ್ದು, ಶೀಘ್ರದಲ್ಲಿ ಪ್ರಕ್ರಿಯೆ ಆರಂಭಿಸಲಾಗುತ್ತದೆ.
10 ಕೋಟಿ ರೂ. ವೆಚ್ಚ : ಸದ್ಯ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಗಾಗಿ 500 ಕೋಟಿ ರೂ.ಗೂ ಹೆಚ್ಚಿನ ವೆಚ್ಚ ಮಾಡಲಾಗುತ್ತಿದೆ. ಅದು ಕೇವಲ ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಮಾತ್ರ. ಆದರೆ ಇದೀಗ ಪ್ರಚಾರ ಕಾರ್ಯಕ್ಕಾಗಿಯೇ 10 ಕೋಟಿ ರೂ. ವ್ಯಯಿಸಲಾಗುತ್ತಿದೆ.
-ಗಿರೀಶ್ ಗರಗ