Advertisement
ರಾಜಧಾನಿಯಲ್ಲಿ ರಸ್ತೆ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಮುಖ ರಸ್ತೆಗಳನ್ನು ವೈಟ್ ಟಾಪಿಂಗ್‌ನಡಿ ಅಭಿವೃದ್ಧಿಪಡಿಸಲು ಪಾಲಿಕೆ ಮುಂದಾಗಿತ್ತು. ಆದರೆ ಹಲವು ರಸ್ತೆಗಳಲ್ಲಿ ಏಕಕಾಲಕ್ಕೆ ಕಾಮಗಾರಿ ಆರಂಭವಾಗಿದ್ದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಇಲ್ಲದ ಪರದಾಡುವಂತಾಗಿದ್ದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
Related Articles
Advertisement
ಹೊರವರ್ತುಲ ರಸ್ತೆಯ ಜ್ಞಾನಭಾರತಿಯಿಂದ ಸುಮನಹಳ್ಳಿ ಜಂಕ್ಷನ್ ಹಾಗೂ ತುಮಕೂರು ರಸ್ತೆಯಿಂದ ಹಳೇ ಮದ್ರಾಸ್ ರಸ್ತೆಯ ಒಟ್ಟು 22.20 ಕಿ.ಮೀ. ಮಾರ್ಗದ ಪೈಕಿ ಒಟ್ಟು 2.9 ಕಿ.ಮೀ. ವೈಟ್‌ಟಾಪಿಂಗ್ ಪೂರ್ಣಗೊಂಡಿದೆ. ನಾಗವಾರ ಹೊರವರ್ತುಲ ರಸ್ತೆ, ವಿಜಯನಗರ, ಹೊಸೂರು ರಸ್ತೆ, ಕೋರಮಂಗಲ, ಮೈಸೂರು ರಸ್ತೆ ಸೇರಿದಂತೆ ಒಟ್ಟು 9.5 ಕಿ.ಮೀ. ಉದ್ದದ ವೈಟ್‌ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.
ಈಗಾಗಲೇ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶದಿಂದ ಕಾಮಗಾರಿ ಮುಂದುವರಿಸಲು ಅನುಮತಿ ನೀಡುವಂತೆ ನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಏಕಕಾಲದಲ್ಲಿ ಕಾಮಗಾರಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಡೆಸಲು ಅನುಮತಿ ಕೋರಲಾಗಿದೆ. -ಕೆ.ಟಿ.ನಾಗರಾಜ್, ಮುಖ್ಯ ಎಂಜಿನಿಯರ್ (ಯೋಜನೆ)