Advertisement

ಸೂಪರ್‌ ಸೀಡ್‌ಗೆ ಎಚ್ಚೆತ್ತ ಬಿಬಿಎಂಪಿ

10:52 AM Nov 20, 2019 | Team Udayavani |

ಬೆಂಗಳೂರು: ಬಿಬಿಎಂಪಿಯನ್ನು “ವಿಸರ್ಜನೆ’ ಮಾಡುವ ಬಗ್ಗೆ ಪರಿಶೀಲನೆ ಮಾಡುವಂತೆ ಹೈಕೋರ್ಟ್‌ ಚಾಟಿ ಬೀಸಿದ ಒಂದೇ ತಿಂಗಳಲ್ಲಿ ಬಿಬಿಎಂಪಿಯ ಅಧಿಕಾರಿಗಳು ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ.

Advertisement

ಇತ್ತೀಚೆಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ನಗರದಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ವಿಚಾರದಲ್ಲಿ ನಿರಂತರವಾಗಿ ವಿಫ‌ಲವಾಗಿರುವ ಮತ್ತುವ್ಯಾಪಕ ಪ್ರಮಾಣದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಬಿಬಿಎಂಪಿಯನ್ನು “ವಿಸರ್ಜನೆ’ ಮಾಡುವ ಕಾನೂನು ಕ್ರಮದ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದಾದ ಒಂದೇ ತಿಂಗಳಲ್ಲಿ ಬಿಬಿಎಂಪಿಯ ಅಧಿಕಾರಿಗಳು ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದಾರೆ.

ಹೈಕೋರ್ಟ್‌ ಅದೇಶ ಪಾಲನೆ: ಬಿಬಿಎಂಪಿ ತೆಗೆದುಕೊಂಡಿರುವ ಸುಧಾರಣಾ ಕ್ರಮಗಳು ಆಡಳಿತದ ಸಹಜ ಭಾಗವಾಗಿ ಕಾಣಿಸಿದರೂ, ಇದರ ಹಿಂದೆ ಹೈಕೋರ್ಟ್‌ನ ಚಾಟಿ ಏಟು ಕೆಲಸ ಮಾಡಿರುವುದು ಸ್ಪಷ್ಟವಾಗಿದೆ. ಹೈಕೋರ್ಟ್‌ ಆದೇಶ ನೀಡಿದ ಕೆಲವೇ ದಿನಗಳಲ್ಲಿ ಬಿಬಿಎಂಪಿಯಲ್ಲಿ ಈ ಬದಲಾವಣೆಗಳು ಆಗಿವೆ. ಹೆಸರು ಹೇಳಲಿfಸದ ಬಿಬಿಎಂಪಿಯ ಅಧಿಕಾರಿಯೊಬ್ಬರು ಹೇಳುವಂತೆ ಡಿ. 18ಕ್ಕೆ ಮತ್ತೆ ಹೈಕೋರ್ಟ್‌ನಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದ್ದು, ಕೋರ್ಟ್ ಗೆ ವಿವರಣೆ ನೀಡಲು ಹಾಗೂ ಬಿಬಿಎಂಪಿ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಅಲ್ಲದೆ, ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ವಾಹನಗಳಿಗೆ ಜಿಪಿಎಸ್‌ ಅಳವಡಿಕೆ, ಬಿಬಿಎಂಪಿಯ ಅಧಿಕಾರಿಗಳಿಗೆ ವಾಕಿಟಾಕಿ ನೀಡುವುದಕ್ಕೆ ಬೇಕಾದ ಸಿದ್ಧತೆಗಳನ್ನೂ ಬಿಬಿಎಂಪಿ ಮಾಡಿಕೊಳ್ಳುತ್ತಿದೆ. ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ನಿಯಮಗಳು-2000 ಮತ್ತು 2016, ನಿರ್ಮಾಣ ಮತ್ತು ತೆರವು ನಿಯಮಗಳು -2016, ಮಾಲಿನ್ಯ ತಡೆ ನಿಯಮಗಳು-1986

ಸೇರಿದಂತೆ ಇತರ ಕಾಯ್ದೆ ಮತ್ತು ಕಾನೂನು ನಿಯಮಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸತತವಾಗಿ ವಿಫ‌ಲವಾಗಿರುವುದರ ಜತೆಗೆ ಕಾನೂನುದತ್ತ ಅಧಿಕಾರ ಚಲಾಯಿಸುವಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವಿರುದ್ಧ “ಕರ್ನಾಟಕ ಮುನ್ಸಿಪಲ್‌ ಕಾಯ್ದೆ-1976ರ ಸೆಕ್ಷನ್‌ 99(1) ಪ್ರಕಾರ ಪಾಲಿಕೆಯನ್ನು ವಿಸರ್ಜನೆ ಮಾಡುವ ಕಾನೂನು ಅಧಿಕಾರ ರಾಜ್ಯ ಸರ್ಕಾರಕ್ಕಿದೆ.

Advertisement

ಈ ಕುರಿತು ಪರಾಮರ್ಶೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಆದೇಶಿಸಿತ್ತು. ಅಲ್ಲದೆ, ಹೊಸ ಕಟ್ಟಡಗಳ ನಿರ್ಮಾಣ ಕಾಮಗಾರಿಯ ಘನತ್ಯಾಜ್ಯ, ಹಳೆ ಕಟ್ಟಡಗಳ ನೆಲಸಮಗೊಳಿಸುವುದರಿಂದ ಉತ್ಪತ್ತಿಯಾಗುವ ತ್ಯಾಜ್ಯ, ಪ್ಲಾಸ್ಟಿಕ್‌ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯಗಳ ವಿಲೇವಾರಿ ಮತ್ತು ನಿರ್ವಹಣೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫ‌ಲವಾಗಿದೆ ಎಂದೂ ಹೈಕೋರ್ಟ್‌ ಹೇಳಿತ್ತು.

 

-ಹಿತೇಶ್‌ ವೈ

Advertisement

Udayavani is now on Telegram. Click here to join our channel and stay updated with the latest news.

Next