Advertisement
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಯೋಜನೆಗಳು, ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ 2023-24ನೇ ಸಾಲಿನ ಬಜೆಟ್ ಸಿದ್ಧಪಡಿಸಲು ಸಿದ್ಧತೆ ನಡೆಸಲಾಗಿದೆ. ಸದ್ಯ ವಿವಿಧ ವಿಭಾಗಗಳಿಂದ ಮುಂದಿನ ವರ್ಷ ಕೈಗೊಳ್ಳಬೇಕಾದ ಯೋಜನೆಗಳು, ಅದಕ್ಕಾಗುವ ವೆಚ್ಚಗಳ ಕುರಿತಂತೆ ಮಾಹಿತಿ ನೀಡುವಂತೆ ಹಣಕಾಸು ವಿಭಾಗ ಕೋರಿದೆ.
Related Articles
Advertisement
ಹೊಸ ಯೋಜನೆಗಳಿಗೆ ಸರ್ಕಾರದ ಅನುದಾನ: ಬಿಬಿಎಂಪಿ ಹಣಕಾಸು ವಿಭಾಗ 2023-24ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಿರುವ ಬಗ್ಗೆಯೂ ಚರ್ಚಿಸಿದೆ. ರಾಜ್ಯ ಅಥವಾ ಕೇಂದ್ರ ಸರ್ಕಾರ ಅನುದಾನ ನೀಡಿದರಷ್ಟೇ ಹೊಸ ಯೋಜನೆ ಘೋಷಿಸುವ ಕುರಿತು ನಿರ್ಧರಿಸಲಾಗಿದೆ. ಅಲ್ಲದೆ, 2022-23ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗಾಗಿಯೇ 6 ಸಾವಿರ ಕೋಟಿ ರೂ. ಅಮೃತ ನಗರೋತ್ಥಾನ ಅನುದಾನ ನೀಡಿದೆ.
ಹೀಗಾಗಿ 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 500ರಿಂದ 1 ಸಾವಿರ ಕೋಟಿ ರೂ. ಅನುದಾನ ಸಿಗುವ ನಿರೀಕ್ಷೆ ಹೊಂದಲಾಗಿದೆ. ಅದರಲ್ಲಿ ಬೀದಿ ದೀಪ ನಿರ್ವಹಣೆಗೆ 80 ಕೋಟಿ ರೂ., ಘನತ್ಯಾಜ್ಯ ನಿರ್ವಹಣೆಗೆ 150 ಕೋಟಿ ರೂ. ನೀಡಲಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ನೀಡುವ ಅನುದಾನ ನಿರ್ವಹಣಾ ವೆಚ್ಚಕ್ಕಷ್ಟೇ ಮೀಸಲಾಗುತ್ತದೆ. ಒಂದು ವೇಳೆ ಹೊಸ ಯೋಜನೆಗಳನ್ನು ಘೋಷಿಸಬೇಕೆಂದರೆ ಸರ್ಕಾರ ಹೆಚ್ಚುವರಿ ಅನುದಾನ ನೀಡಿದರಷ್ಟೇ ಮುಂದಿನ ಯೋಚನೆ ಮಾಡಲು ನಿರ್ಧರಿಸಲಾಗಿದೆ.
ಈ ಬಾರಿಯ ಬಜೆಟ್ ಸಿದ್ಧಪಡಿಸುವ ವೇಳೆ ಹಾಸಿಗೆ ಇದ್ದಷ್ಟು ಕಾಲು ಚಾಚಲು ನಿರ್ಧರಿಸಲಾಗಿದೆ. ಹೀಗಾಗಿ ಬಿಬಿಎಂಪಿ ಆದಾಯಕ್ಕೆ ತಕ್ಕಂತೆ ಬಜೆಟ್ ಗಾತ್ರ ನಿಗದಿ ಮಾಡಲಾಗುವುದು. ಸದ್ಯ ಬಿಬಿಎಂಪಿಗೆ 4ರಿಂದ 4,500 ಕೋಟಿ ರೂ. ಆದಾಯವಿದೆ. ಅದರಂತೆ 5ರಿಂದ 5,500 ಕೋಟಿ ರೂ. ಬಜೆಟ್ ಗಾತ್ರ ನಿಗದಿ ಮಾಡಲಾಗುವುದು. ಜತೆಗೆ ಹೊಸ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಅನುದಾನ ನೀಡಿದರಷ್ಟೇ ಬಜೆಟ್‌ನಲ್ಲಿ ಘೋಷಿಸಲಾಗುವುದು. – ಜಯರಾಮ್ ರಾಯಪುರ, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)