Advertisement

ಬಿಬಿಎಂಪಿ ವ್ಯಾಪ್ತಿ ಶಾಲಾ ಕಾಲೇಜು ಶಿಕ್ಷಣ ಇಲಾಖೆಗೆ

11:28 AM Feb 09, 2018 | Team Udayavani |

ವಿಧಾನ ಪರಿಷತ್‌: ಬಿಬಿಎಂಪಿ ವ್ಯಾಪ್ತಿಯಲ್ಲಿನ ಶಾಲಾ -ಕಾಲೇಜುಗಳ ನಿರ್ವಹಣೆಯನ್ನು ಶಿಕ್ಷಣ ಇಲಾಖೆಗೆ ವಹಿಸುವ ಕುರಿತು ಚಿಂತನೆ ನಡೆದಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Advertisement

 ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಮಚಂದ್ರಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ 11 ಪಾಲಿಕೆ ಕಾಲೇಜುಗಳಲ್ಲಿ ಪ್ರಾಚಾರ್ಯರೇ ಇಲ್ಲ. ಉಳಿದ ಎಲ್ಲ ಹುದ್ದೆಗಳನ್ನು ಹೊರ ಗುತ್ತಿಗೆಯಿಂದಲೇ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜುಗಳನ್ನು ಪಾಲಿಕೆ ನಿರ್ವಹಣೆ ಮಾಡುವುದು ಕಷ್ಟ.

ಶಿಕ್ಷಣ ಇಲಾಖೆಗೆ ಜವಾಬ್ದಾರಿ ವಹಿಸುವುದು ಸೂಕ್ತ ಎಂದು ತಿಳಿಸಿದರು. ಪಾಲಿಕೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಮಂಜೂರಾಗಿರುವ 17931 ಹುದ್ದೆಗಳಲ್ಲಿ 10320 ಹುದ್ದೆಗಳು ಖಾಲಿ ಇವೆ. ಬಹುತೇಕ ಜವಾಬ್ದಾರಿಗಳನ್ನು ಹೊರ ಗುತ್ತಿಗೆ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ.

5811 ಪೌರ ಕಾರ್ಮಿಕ ವೃಂದದ ಹುದ್ದೆಗಳು ಖಾಲಿ ಉಳಿದಿವೆ. ಶೀಘ್ರವೇ ಪೌರ 4 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಿಕೊಳ್ಳಲಾಗುವುದು. ಪೌರ ಕಾರ್ಮಿಕರಿಗೆ ಪಾಲಿಕೆಯಿಂದಲೇ ಸಂಬಳ ನೀಡುತ್ತಿರುವುದರಿಂದ ವೇತನ ನೀಡುತ್ತಿರುವುದಿಂದ ವೇತನ ಹೆಚ್ಚಳವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next