Advertisement

ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಹಠಾತ್ ನಿಧನ

09:04 AM Oct 05, 2018 | |

ಬೆಂಗಳೂರು: ಇತ್ತೀಚೆಗಷ್ಟೇ  ಬಿಬಿಎಂಪಿಯ ಉಪ ಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ ( 44 ವರ್ಷ ) ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನ ಹೊಂದಿದ್ದಾರೆ. 

Advertisement

ತಡರಾತ್ರಿ 12 ಗಂಟೆಯ ಸುಮಾರಿಗೆ ತೀವೃ ಎದೆನೋವು ಕಂಡು ಬಂದಿತ್ತು. ಕೂಡಲೇ ರಮೀಳಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಕಾವೇರಿಪುರಂ ವಾರ್ಡ್ ನಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಕಳೆದ ವಾರ ನಡೆದಿದ್ದ ಬಿಬಿಎಂಪಿ ಮೇಯರ್ ಉಪಮೇಯರ್ ಚುಣಾವಣೆಯಲ್ಲಿ ಉಪಮೇಯರ್ ಆಗಿ ಆಯ್ಕೆಗೊಂಡಿದ್ದರು. 

ಉಪಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ನಿನ್ನೆಯಷ್ಟೇ ಅವರು ‘ ನಮ್ಮ ಮೇಟ್ರೋ’ ಕರ‍್ಯಕ್ರಮದಲ್ಲಿ ನಮ್ಮೊಂದಿಗೆ ಭಾಗಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು ಎಂದು ಸಂತಾಪ ಸೂಚಿಸಿದ್ದಾರೆ. 


ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರು ಸಂತಾಪ ಸೂಚಿಸಿದ್ದು, ರಮೀಳಾ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಕಾಳಜಿ ಹೊಂದಿದ್ದ ಕ್ರಿಯಾಶೀಲ ಮಹಿಳೆ ಅವರು. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಎಂದಿದ್ದಾರೆ. 

Advertisement

ಶುಕ್ರವಾರ ಬಿಬಿಎಂಪಿ ವ್ಯಾಪ್ರಿಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ರಮೀಳಾ ಉಮಾಶಂಕರ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next