Advertisement
ಅವಧಿ ಮುಗಿದಿರುವ ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಪಾಲಿಕೆಯ ಕಾಂಗ್ರೆಸ್ ಮಾಜಿ ಸದಸ್ಯ ಶಿವರಾಜ್ ಹಾಗೂ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
Related Articles
Advertisement
ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದಿಸಿ, ಬಿಬಿಎಂಪಿ ಗೆ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮತದಾರರ ಪಟ್ಟಿ ಪ್ರಕಟಿಸುವುದಷ್ಟೇ ಬಾಕಿಯಿದೆ. ಮತದಾರರ ಪಟ್ಟಿ ತಯಾರಿಕೆಗೆ3 ಕೋಟಿ ವೆಚ್ಚವಾಗಿದೆ. ವಾರ್ಡ್‌ಸಂಖ್ಯೆ ಹೆಚ್ಚಿಸಿದರೆ ಚುನಾವಣೆ ಮತ್ತೂಂದು ವರ್ಷ ವಿಳಂಬವಾಗಲಿದೆ. ಕ್ಷೇತ್ರ ಪುನರ್ ವಿಂಗಡಣೆಗೆ ನಾಲ್ಕು ತಿಂಗಳು ಹಿಡಿಯಲಿದೆ ಎಂದರು.
ಅಲ್ಲದೇ, 2015ರ ಚುನಾವಣೆಯನ್ನು 2001ರ ಜನಗಣತಿ ಆಧಾರದಲ್ಲೇ ನಡೆಸಲಾಗಿತ್ತು. ಆದರೆ ಸರ್ಕಾರ ಇದೀಗ 2011 ರ ಜನಗಣತಿ ಆಧಾರದಲ್ಲಿ ವಾರ್ಡ್ ವಿಂಗಡಣೆ ಮಾಡಲು ಮುಂದಾಗಿದೆ. ಅಷ್ಟಕ್ಕೂ ಸರ್ಕಾರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿಲ್ಲ. ಬದಲಿಗೆ198 ವಾರ್ಡ್ ಗಳನ್ನೇ243 ವಾರ್ಡ್ ಗಳಾಗಿ ಮರು ವಿಂಗಡಿಸಲು ಮುಂದಾಗಿದೆ ಎಂದರು.
ಈ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ವಾದಮಂಡನೆಗೆ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ವಾದ ಮಂಡಿಸಲು ಸಮಯಾವಕಾಶ ನೀಡಿ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.