Advertisement
ಸರ್ಕಾರದ ಮನವಿಯಂತೆ ಹೈಕೋರ್ಟ್ ಕೂಡ ಕಾಲಾವಕಾಶ ಕೊಟ್ಟಿದೆ. ಬಿಬಿಎಂಪಿ ವಾರ್ಡ್ ಮರುವಿಂಗಣೆ ಮಾಡಿ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2022ರ ಜು.14ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್ ಬಿ.ಎನ್. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ಕೆಲವೊಂದು ಲೋಪದೋಷಗಳಾಗಿವೆ. ಅವು ಸರ್ಕಾರದ ಗಮನಕ್ಕೆ ಬಂದಿವೆ.
Related Articles
Advertisement
ಅರ್ಜಿಯಲ್ಲಿ ವಾದ ಏನಾಗಿತ್ತು?: ಬಿಬಿಎಂಪಿ ವ್ಯಾಪ್ತಿಯ 84 ಲಕ್ಷ ಜನಸಂಖ್ಯೆಯನ್ನು ಒಟ್ಟು 243 ವಾರ್ಡ್ ಗಳಿಂದ ಭಾಗಿಸಿದರೆ ಪ್ರತಿ ವಾರ್ಡ್‌ಗೆ ಅಂದಾಜು 34,500 ಜನಸಂಖ್ಯೆಯಾಗುತ್ತದೆ. ವಾರ್ಡ್ ವಿಂಗಡಣೆಯಲ್ಲಿ ಜನಸಂಖ್ಯೆಯ ಪರಿಗಣಿಸುವಲ್ಲಿ ಶೇ.10ರಷ್ಟು ಏರಿಳಿತದ ಅನುಪಾತ ಅನುಸರಿಸಲಾಗಿದೆ ಎಂಬುದಾಗಿ ಸರ್ಕಾರ ಹೇಳಿದೆ. ಸರ್ಕಾರ ಹೇಳಿದಂತೆ ಶೇ.10ರಷ್ಟು ಏರಿಳಿತ ಅನುಪಾತ ಪರಿಗಣಿಸಿದರೂ ವಾರ್ಡ್ ಜನಸಂಖ್ಯೆ 31 ಸಾವಿರದಿಂದ 37 ಸಾವಿರದ ಆಸುಪಾಸಿಗೆ ಬರುತ್ತದೆ. ಆದರೆ, ಕೆಲ ವಾರ್ಡ್‌ಗಳಲ್ಲಿ 30 ಸಾವಿರ ಜನ ಸಂಖ್ಯೆಯಿದೆ. ಮತ್ತೆ ಕೆಲ ವಾರ್ಡ್‌ಗಳಲ್ಲಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ.
ಇನ್ನೂ ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಲ್ಲಿ ಸಂಖ್ಯೆ ಕಡಿತಗೊಳಿಸಲಾಗಿದೆ. ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳ ವಾರ್ಡ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾಜಕೀಯ ಲಾಭಕ್ಕಾಗಿ ಹೀಗೆ ಮಾಡಲಾಗಿದೆ ಎಂಬುದು ತಕರಾರು ಅರ್ಜಿಯಲ್ಲಿ ದೂರಲಾಗಿತ್ತು.
ಏಕಸದಸ್ಯ ನ್ಯಾಯಪೀಠ ಏನು ಹೇಳಿತ್ತು?: ವಾರ್ಡ್ ಮರು ವಿಂಗಡಣೆ ಸಂಕೀರ್ಣ ಕೆಲಸ. ಎಲ್ಲ ವಾರ್ಡ್‌ಗಳನ್ನೂ ಸಮಾನ ಜನಸಂಖ್ಯೆಗೆ ಅನುಗುಣವಾಗಿ ವಿಂಗಡಿಸುವುದು ಸುಲಭವಲ್ಲ. ಹಲವು ಅಂಶಗಳ ಆಧಾರದಲ್ಲಿ ವಿಸ್ತಾರವಾದ ಪ್ರದೇಶಗಳನ್ನು ವಿಂಗಡಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉದ್ಭವಿ ಸುವುದು ಸಹಜ. ಆದ್ದರಿಂದ, ಸಣ್ಣಪಟ್ಟ ಲೋಪ ವಿದ್ದರೆ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ. ಗಂಭೀರ ಲೋಪ ಕಂಡುಬಂದರೆ ಮಾತ್ರ ಮಧ್ಯ ಪ್ರವೇಶಿಸಲಾಗುವುದು ಎಂದು ಏಕಸದಸ್ಯ ನ್ಯಾಯಪೀಠ 2022ರ ಸೆ.19ರ ಆದೇಶದಲ್ಲಿ ಅಭಿಪ್ರಾಯಪಟ್ಟಿತ್ತು.