Advertisement
ಅಧಿಕಾರದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳೂ ಪಾಲಿಕೆಯಚುನಾವಣೆಮುಂದೂಡಿಕೆಮಾಡುವುದಕ್ಕೆ ಬೇಕಾದ ಎಲ್ಲ ರೀತಿಯ ದಾಳ ಪ್ರಯೋಗಿಸುತ್ತವೆ ಎನ್ನುವುದು ಮಾಜಿ ಮೇಯರ್‌ಗಳ ದೂರು. ಬೆಂಗಳೂರು ಮಹಾನಗರ ಪಾಲಿಕೆ (ಬಿಎಂಪಿ) ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಾಗಿ ಬದಲಾದ ಮೇಲೂ ಸಕಾಲದಲ್ಲಿ ಚುನಾವಣೆಗಳುನಡೆದಿಲ್ಲ.ಸ್ಥಳೀಯಸಂಸ್ಥೆಚುನಾವಣೆ ಒಂದಿಲ್ಲೊಂದು ಕಾರಣದಿಂದಾಗಿ ಮುಂದೂಡಿಕೆಯಾಗಿರುವ ಉದಾಹರಣೆ ಇದೆ.
Related Articles
Advertisement
ವಾರ್ಡ್‌ಗಳ ಸಂಖ್ಯೆ 250ಕ್ಕೆ ಹೆಚ್ಚಿಸಲು ಒಪ್ಪಿಗೆ :
ಬೆಂಗಳೂರು: ಬಿಬಿಎಂಪಿ ವಾರ್ಡ್ ಸಂಖ್ಯೆಗಳನ್ನು 198 ರಿಂದ250ಕ್ಕೆ ಹೆಚ್ಚಳ ಮಾಡಲು ವಿಧಾನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಬಿಬಿಎಂಪಿ ಕಾಯ್ದೆ ತಿದ್ದುಪಡಿ ಮಾಡಲು ಈಗಾಗಲೇ ಜಂಟಿ ಸದನ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ಪ್ರಾಥಮಿಕ ವರದಿ ನೀಡಿದ್ದು, ಅದರನ್ವಯ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆಯನ್ನು198 ರಿಂದ250 ಹೆಚ್ಚಳ ಮಾಡಲು ಶಿಫಾರಸ್ಸು ಮಾಡಿದೆ. ಬಿಬಿಎಂಪಿ ವಿಭಜನೆ ಮಾಡುವ ಬದಲು ಜನಸಂಖ್ಯೆ ಆಧಾರದಲ್ಲಿ ವಾರ್ಡ್ ಗಳಮರು ವಿಂಗಡಣೆ ಮಾಡಲು ತೀರ್ಮಾನಿಸಲಾಗಿದೆ ಎಂದುಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದರು.
ಅದರಂತೆ ವಾರ್ಡ್ ಗಳ ಸಂಖ್ಯೆ ಹೆಚ್ಚಳ ಮಾಡಲು ಸದನದ ಒಪ್ಪಿಗೆ ಪಡೆಯಲಾಯಿತು. ಆದರೆ,ವಾರ್ಡ್‌ಗಳ ಸಂಖ್ಯೆಯನ್ನು252ಕ್ಕೆ ಹೆಚ್ಚಿಸಬೇಕು ಎಂಬ ಒತ್ತಡ ಇದೆ ಎಂದು ತಿಳಿದು ಬಂದಿದ್ದು,9 ಸಂಖ್ಯೆ ಬರಬೇಕು ಎನ್ನುವಕಾರಣಕ್ಕೆ ವಾರ್ಡ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಶಾಸಕರು ಸಮಿತಿ ಅಧ್ಯಕ್ಷರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ನೋಟಿಸ್ :
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆಡಳಿತಾಧಿಕಾರಿಯನ್ನು ನೇಮಿಸಿ ಹೊರಡಿಸಿದ ಆದೇಶ ಪ್ರಶ್ನಿಸಿ ಮತ್ತು ಪಾಲಿಕೆಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದುಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಶಿವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಬಿಬಿಎಂಪಿ ಚುನಾವಣೆ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿ, ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅ.12ಕ್ಕೆ ಮುಂದೂಡಿತು.
ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಸೆ.10ಕ್ಕೆ ಮುಗಿದಿದೆ. ಅದಕ್ಕೂ ಮುನ್ನ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಆದರೆ,ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾಲಿಕೆಯಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇರಬೇಕಿತ್ತು. ಆದರೆ, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಲ್ಲದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ವಿಸ್ತರಣೆ ನೆಪದಲ್ಲಿ ಚುನಾವಣೆ ಮುಂದೂಡಿಕೆ : 2007ರಲ್ಲಿ110 ಹಳ್ಳಿಗಳ ಸೇರ್ಪಡೆ ಮಾಡುವ ಉದ್ದೇಶದಿಂದ ಚುನಾವಣೆ ಮುಂದೂಡಿಕೆಯಾಗಿತ್ತು. 2020ರಲ್ಲಿ ವಾರ್ಡ್‌ಗಳ ಸಂಖ್ಯೆ198ರಿಂದ250ಕ್ಕೆ ಏರಿಕೆ ಮಾಡುವ ಹಾಗೂ ಬಿಬಿಎಂಪಿಗೆ ಪ್ರತ್ಯೇಕಕಾಯ್ದೆ ರಚನೆ ಪ್ರಸ್ತಾಪದಿಂದ ಮುಂದೂಡಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಪಾಲಿಕೆ ಚುನಾವಣೆಗೆ ಕೋವಿಡ್ ಸೋಂಕು ಭೀತಿಯೂ ಶುರುವಾಗಿದೆ.
-ಹಿತೇಶ್ ವೈ