Advertisement
ಈ ಮಧ್ಯೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್‌ಗಳನ್ನು ಇತ್ತೀಚೆಗೆ 243 ವಾರ್ಡ್‌ಗಳಾಗಿ ರಚಿಸಲಾಗಿದೆ.ಇದಕ್ಕೆ ಹೊಂದಾಣಿಕೆ ಆಗುವಂತೆ ಬಿಬಿಎಂಪಿ ಚುನಾವಣೆ ನಡೆಸಲು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗವು ನಗರದ 28 ವಿಧಾನಸಭಾ ಕ್ಷೇತ್ರಗಳಿಗೆ ಆಯಾ ವಲಯಗಳ ಜಂಟಿ ಆಯುಕ್ತರನ್ನು ಅಧಿಕ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನಾಗಿ ನಿಯೋಜಿಸಿದೆ.
● ಅಬ್ದುಲ್ ವಾಜಿದ್, ಪಾಲಿಕೆಯ
ಮಾಜಿ ವಿಪಕ್ಷ ನಾಯಕ
Related Articles
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸರ್ಕಾರ ಮತ್ತು ಬಿಜೆಪಿ ಪಕ್ಷ ಎರಡೂ ಸಿದ್ಧವಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಸಂಬಂಧ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳಲಿದೆ. ಚುನಾವಣೆ ನಡೆಸುವ ಸಂಬಂಧ ಯಾವುದೇ ಭೀತಿ ನಮಗಿಲ್ಲ. ಈಗಾಗಲೇ ಬೂತ್ ಹಾಗೂ ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಪಾಲಿಕೆ ಚುನಾವಣೆ ಸಂಬಂಧ ಪಕ್ಷದ ಕಾರ್ಯಕರ್ತರು, ಮುಖಂಡರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಸಂಬಂಧ ಹಲವು ಸಭೆಗಳನ್ನು ನಡೆಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.
Advertisement