Advertisement

ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ ಸಾಧ್ಯತೆ

05:47 PM Jul 29, 2022 | Team Udayavani |

ಬೆಂಗಳೂರು: ಪಾಲಿಕೆ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೀಸಲಾತಿ ಪಟ್ಟಿ ಸಿದ್ಧಪಡಿಸಲು 1 ವಾರದ ಗಡುವು ನೀಡಿದ್ದು ಒಂದು ವೇಳೆ ಮತದಾರರ ಪಟ್ಟಿ ಅಂತಿಮಗೊಂಡಲ್ಲಿ ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

Advertisement

ಈ ಮಧ್ಯೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್‌ಗಳನ್ನು ಇತ್ತೀಚೆಗೆ 243 ವಾರ್ಡ್‌ಗಳಾಗಿ ರಚಿಸಲಾಗಿದೆ.ಇದಕ್ಕೆ ಹೊಂದಾಣಿಕೆ ಆಗುವಂತೆ ಬಿಬಿಎಂಪಿ ಚುನಾವಣೆ ನಡೆಸಲು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗವು ನಗರದ 28 ವಿಧಾನಸಭಾ ಕ್ಷೇತ್ರಗಳಿಗೆ ಆಯಾ ವಲಯಗಳ ಜಂಟಿ ಆಯುಕ್ತರನ್ನು ಅಧಿಕ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನಾಗಿ ನಿಯೋಜಿಸಿದೆ.

ಎಲ್ಲ ವಾರ್ಡ್‌ಗಳಲ್ಲಿ ವಾಸವಿರುವ ಮತದಾರರ ಪಟ್ಟಿ ಹಂಚಿಕೆ, ಹೊಸ ಬೂತ್‌ಗಳ ರಚನೆ, ಹೊಸ ಮತದಾರರ ಸೇರ್ಪಡೆ ಕಾರ್ಯ ಮಾಡಬೇಕಿದೆ. ಈ ಕಾರ್ಯವನ್ನು ಪೂರ್ಣಗೊಳಿಸಲು ಕನಿಷ್ಠ ಒಂದೂವರೆ ತಿಂಗಳು ಕಾಲಾವಕಶಾ ತೆಗೆದುಕೊಳ್ಳಬಹುದು. ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಶೀಲಿಸಿ ಆಕ್ಷೇಪಣೆಗಳನ್ನು ಪಡೆದು, ಅವುಗಳನ್ನು ವಿಲೇವಾರಿ ಮಾಡಿ ಅಂತಿಮ ಪಟ್ಟಿ ಸಿದ್ಧಪಡಿಸಲಿದೆ. ಈ ಎಲ್ಲ ಪ್ರಕ್ರಿಯೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ನವೆಂಬರ್‌ ಅಥವಾ ಡಿಸೆಂಬರ್‌ ವೇಳೆಗೆ ಚುನಾವಣೆ ಘೋಷಣೆ ಮಾಡುವ ನಿರೀಕ್ಷೆಯಿದೆ.

ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್‌ ಒಂದು ವಾರದೊಳಗೆ ವಾರ್ಡ್‌ ಮೀಸಲಾತಿ ಘೋಷಣೆ ಎಂದು ಆದೇಶ ನೀಡಿರು ವುದನ್ನು ಸ್ವಾಗತಿಸುತ್ತೇನೆ. ಸರ್ಕಾರ ಕೂಡಲೇ ಮೀಸಲಾತಿ ಅಂತಿಮಗೊಳಿಸಿ, ಚುನಾವಣಾ ಆಯೋಗವು ಬಿಬಿಎಂಪಿ ಚುನಾವಣೆ ನಡೆಸಲು ಅನುಕೂಲ ಮಾಡಿಕೊಡಬೇಕು.
● ಅಬ್ದುಲ್‌ ವಾಜಿದ್‌, ಪಾಲಿಕೆಯ
ಮಾಜಿ ವಿಪಕ್ಷ ನಾಯಕ

ಚುನಾವಣೆಗೆ ಸರ್ಕಾರ ಸಿದ್ಧ
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸರ್ಕಾರ ಮತ್ತು ಬಿಜೆಪಿ ಪಕ್ಷ ಎರಡೂ ಸಿದ್ಧವಿದೆ ಎಂದು ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ. ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್‌ ಆದೇಶದ ಸಂಬಂಧ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳಲಿದೆ. ಚುನಾವಣೆ ನಡೆಸುವ ಸಂಬಂಧ ಯಾವುದೇ ಭೀತಿ ನಮಗಿಲ್ಲ. ಈಗಾಗಲೇ ಬೂತ್‌ ಹಾಗೂ ವಾರ್ಡ್‌ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಪಾಲಿಕೆ ಚುನಾವಣೆ ಸಂಬಂಧ ಪಕ್ಷದ ಕಾರ್ಯಕರ್ತರು, ಮುಖಂಡರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಸಂಬಂಧ ಹಲವು ಸಭೆಗಳನ್ನು ನಡೆಸಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next