Advertisement
ಇದರೊಂದಿಗೆ ಮುಂಜಾಗ್ರತಾ ಕ್ರಮವಾಗಿ ಕಟ್ಟಡ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ಕಟ್ಟಡ ಮಾಲೀಕ ಶಿವಪ್ರಸಾದ್ ನೆಲಮಹಡಿ ಸೇರಿ ಒಟ್ಟು ಮೂರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿಯಿಂದ ನಕ್ಷೆ ಪಡೆದುಕೊಂಡಿದ್ದರು. ಆದರೆ, ಕಾನೂನು ಬಾಹಿರವಾಗಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ನಿಯಮಗಳನ್ನು ಉಲ್ಲಂ ಸಿದರಿಂದಾಗಿ ಕಟ್ಟಡ ವಾಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Advertisement
ಎರಡು ದಿನದಲ್ಲಿ ತೆರವು: ಶುಕ್ರವಾರ ಬೆಳಗ್ಗೆಯಿಂದ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ನಾಲ್ಕು ಅಂತಸ್ತಿನ ಕಟ್ಟಡವಾದ್ದರಿಂದ ಯಂತ್ರೋಪಕರಣಗಳನ್ನು ಬಳಿಸಿದರೆ, ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂಬ ಕಾರಣದಿಂದ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅದರಂತೆ ಶನಿವಾರದಿಂದ ಸಣ್ಣ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಿ 2-3 ದಿನದೊಳಗಾಗಿ ಕಟ್ಟಡ ಸಂಪೂರ್ಣ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಟ್ಟಡ ನಿಯಮಾವಳಿಗಳನ್ನು ಉಲ್ಲಂ ಸಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿರುವ ಮಾಲೀಕನ ಮೇಲೆ ಎಚ್‌ಎಎಲ್ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಗುತ್ತಿಗೆದಾರರನ್ನೂ ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಕಟ್ಟಡಗಳು ನಿರ್ಮಾನವಾಗುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಪಾಲಿಕೆಯ ಎಂಜಿನಿಯರ್ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಪಾಲಿಕೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ನೆಲಸಮ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. -ಗಂಗಾಂಬಿಕೆ, ಮೇಯರ್