ಬೆಂಗಳೂರು: ಎಇಸಿಎಸ್ ಲೇಔಟ್‌ನ ಯಮ್‌ಲೋಕ್ ಹೋಟೆಲ್ ಮ್ಯಾನ್‌ಹೋಲ್ ಘಟನೆ ಸಂಬಂಧ ಆರೋಗ್ಯಾಧಿಕಾರಿ ದೇವರಾಜ್, ಡಿಎಚ್‌ಒ ಕಲ್ಪನಾರನ್ನು ಬುಧವಾರ ಬಂಧಿಸಲಾಗಿದೆ. ಇನ್ನು ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಹೋಟೆಲ್ ವ್ಯವಸ್ಥಾಪಕ ಆಯುಷ್ ಗುಪ್ತ, ಕಟ್ಟಡ ನಿರ್ವಾಹಕ ವೆಂಕಟೇಶ್‌ನನ್ನು ಬಂಧಿಸಲಾಗಿತ್ತು.
ಬಿಬಿಎಂಪಿ ಸಿಬ್ಬಂದಿ ವಿರುದ್ಧ ಐಪಿಸಿ ಸೆಕ್ಷನ್ 304ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಟ್ಟಡಗಳ ನೆಲಮಹಡಿಯಲ್ಲಿ ಹೋಟೆಲ್ ಸೇರಿ ಯಾವುದೇ ವಾಣಿಜ್ಯ ಮಳಿಗೆಗಳು ಕಾರ್ಯ ನಿರ್ವಹಿಸ ಬಾರದು ಎಂಬ ನಿಯಮವಿದೆ. ಆದರೆ, ಈ ನಿಯಮ ಮೀರಿ ಯಮ್ ಲೋಕ್ ಹೋಟೆಲ್ ಮಾಲೀಕರು ನೆಲಮಹಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು.
ಮೊದಲ ಮಹಡಿಗೆ ಅನುಮತಿ ಪಡೆದು ನೆಲಮಹಡಿಯಲ್ಲಿ ಹೋಟೆಲ್ ನಡೆಸುತ್ತಿದ್ದ ವಿಚಾರ ತನಿಖೆಯಲ್ಲಿ ತಿಳಿದು ಬಂದಿದೆ. ಈ ಬಗ್ಗೆ ಬಿಬಿಎಂಪಿ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಇದ್ದರೂ ಹೋಟೆಲ್ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮೃತ ಕೂಲಿ ಕಾರ್ಮಿಕರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಆರೋಪಿಗಳ ವಿರುದ್ಧ ಎಸ್ಟಿ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಆಯುಕ್ತರಿಗೆ ಪತ್ರ: ನಗರದ ಕಟ್ಟಡಗಳ ನೆಲಮಹಡಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಅನುಮತಿ ನೀಡದಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಇಂಥ ಪ್ರಕರಣ ಮರುಕಳಿಸಿದರೆ, ಮಾಲೀಕರು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.