ಬೆಂಗಳೂರು: ಯಶವಂತಪುರ ವಾರ್ಡ್‌ನ ಬಿ.ಕೆ.ನಗರದಲ್ಲಿನ ಆರ್ಥಿ ಕವಾಗಿ ಹಿಂದುಳಿದ ವರ್ಗದವರಿಗೆ ವಸತಿ ಸಂಕೀರ್ಣ ನಿರ್ಮಿಸಿಕೊಡುವ ಕಾಮಗಾರಿಗೆ ಭಾನುವಾರ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಮೇಯರ್ ಜಿ. ಪದ್ಮಾವತಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಮಹತ್ವ ನೀಡಿದ್ದು, ಮುಖ್ಯಮಂತ್ರಿಗಳು ವಿವಿಧ ಯೋಜನೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಿದ್ದಾರೆ. ಅದರಂತೆ ನಗರದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ನಿಗದಿತ ಅವಧಿ ಯೊಳಗೆ ಪೂರ್ಣಗೊಳಿಸಲಾಗು ವುದು ಎಂದು ತಿಳಿಸಿದರು.
ನಗರದ ಅಭಿವೃದ್ಧಿ ಸಹಿಸದ ಕೆಲವರು ಸರ್ಕಾರದಿಂದ ಯಾವುದೇ ಯೋಜನೆಯನ್ನು ಕೈಗೆತ್ತಿಕೊಂಡರೂ ಆರೋಪ ಮಾಡುತ್ತಿದ್ದಾರೆ. ಆ ಮೂಲಕ ನಗರದ ಅಭಿವೃದ್ಧಿಯನ್ನು ತಡೆಯುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಾರ್ವನಿಕರ ಅನುಕೂಲಕ್ಕಾಗಿ ಹೆಚ್ಚು ಹೆಚ್ಚು ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕವೇ ಉತ್ತರ ನೀಡಲಾಗುತ್ತಿದೆ ಎಂದು ತಿರುಗೇಟು ನೀಡಿದರು.
ಶಾಸಕ ಮುನಿರತ್ನ ಮಾತನಾಡಿ, ಈ ಭಾಗದ ಜನರಿಗೆ ಚುನಾವಣೆಗೆ ಮೊದಲು ನೀಡಿದ ವಾಗ್ಧಾನದಂತೆ ಮನೆ ನಿರ್ಮಿಸಿಕೊಡುವ ಯೋಜನೆಗೆ ಸರ್ಕಾರ ಮುಂದಾಗಿದೆ. ಜತೆಗೆ ಫಲಾನುಭವಿಗಳಿಗೆ ತಾತ್ಕಾಲಿಕವಾಗಿ ವಾಸಿಸಲು ಪಯಾರ್ಯ ವ್ಯವಸ್ಥೆಯನ್ನು ಮಾಡಲಾಗಿದ್ದು, ನಿವಾಸಿ ಗಳು ಆದಷ್ಟು ಬೇಗ ಮನೆ ಖಾಲಿ ಮಾಡಿದರೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಕೊಳೆಗೇರಿಗಳನ್ನು ತೆರವುಗೊಳಿಸಿ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ವಸತಿ ಸಂಕೀರ್ಣ ನಿರ್ಮಾಣಕ್ಕೆ ಮುಂದಾ ಗಿದ್ದೇವೆ. ಅದೇ ರೀತಿ ಬಿಬಿಎಂಪಿಯ ಆಸ್ಪತ್ರೆಯನ್ನು ಉನ್ನತೀಕರಿಸುವ ಕೆಲಸ ಪ್ರಗತಿಯಲ್ಲಿದ್ದು, ಮುಂದಿನ ತಿಂಗಳೊಳಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಇದರೊಂದಿಗೆ ಸರ್ಕಾರದಿಂದ ನೀಡಲಾಗಿರುವ ಅನುದಾನ ದಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಅಭಿವೃದ್ಧಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾ ಗಿದೆ ಎಂದು ಹೇಳಿದರು.
ಮೇಯರ್ ಜಿ.ಪದ್ಮಾವತಿ, ಯಶವಂತಪುರ ವಾರ್ಡ್‌ನ ಬಿ.ಕೆ.ನಗರ ನಿವಾಸಿಗಳಿಗೆ ಶಾಶ್ವತ ಪರಿಹಾರ ಒದಗಿಸುವ ಕೊಡುವ ಉದ್ದೇಶದಿಂದ ಶಾಸಕರು 16.25 ಕೋಟಿ ವೆಚ್ಚದಲ್ಲಿ 425 ಮನೆಗಳನ್ನು ಒಳಗೊಂಡ ವಸತಿ ಸಂಕೀರ್ಣ ನಿರ್ಮಾಣಕ್ಕೆ ಮುಂದಾ ಗಿರುವುದು ಸ್ವಾಗತಾರ್ಹ. ಆ ಮೂಲಕ ಸುಮಾರು 40-50 ವರ್ಷಗಳಿಂದ ಈ ಭಾಗದಲ್ಲಿ ವಾಸಿಸುತ್ತಿರುವ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.