Advertisement
ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಕೂಡ ಅರ್ಜಿ ವಿಚಾರಣೆಗೆ ಬರಲಿದ್ದು, ಅಷ್ಟರಲ್ಲಾಗಲೇ ಸೋಮವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವೊಂದನ್ನು ರಾಜ್ಯ ಸರಕಾರ ಕೈಗೊಂ ಡಿದೆ. ಅಧಿವೇಶನದಲ್ಲಿ ಈ ಮಸೂದೆಗೆ ಅಂಗೀ ಕಾರ ಪಡೆದ ಬಳಿಕ ಅದನ್ನೇ ಪ್ರಮಾಣ ಪತ್ರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರಕಾರದ ವಿರುದ್ಧ ಮತ್ತೂಂದು ಸುತ್ತಿನ ಸಮರಕ್ಕೆ ಸಜ್ಜಾದಂತಿರುವ ರಾಜ್ಯ ಸರಕಾರವು, “ಒಂದು ದೇಶ ಒಂದು ಚುನಾವಣೆ’, ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ನೀಟ್ ವಿರುದ್ಧ ನಿರ್ಣಯಗಳನ್ನು ಮಂಡಿಸಲು ಮುಂದಾಗಿದೆ. ಸಚಿವ ಸಂಪುಟ ಸಭೆಯ ವಿಷಯಪಟ್ಟಿಯಲ್ಲಿ ಈ ಬಗ್ಗೆ ಪ್ರಸ್ತಾವವಿಲ್ಲದಿದ್ದರೂ ನೀಟ್ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಅವರು ಅನೌಪಚಾರಿಕವಾಗಿ ವಿಷಯ ಪ್ರಸ್ತಾವಿಸಿದ್ದಾರೆ. ಸುಮಾರು 15 ನಿಮಿಗಳ ಕಾಲ ನೀಟ್ ಗೊಂದಲಗಳ ಬಗ್ಗೆ ಸಚಿವ ಸಂಪುಟ ಸಭೆಗೆ ಅವರು ವಿವರಣೆ ನೀಡಿದ್ದಾರೆ.
Related Articles
Advertisement
ಇದರ ಜತೆಗೆ ಒಂದು ದೇಶ ಒಂದು ಚುನಾವಣೆಯ ನೆಪದಲ್ಲಿ ದೇಶದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಮಟ್ಟ ಹಾಕುವ ಹುನ್ನಾರ ಅಡಗಿದೆ. ಇದು ಪ್ರಜಾಪ್ರಭುತ್ವಕ್ಕೂ ವಿರುದ್ಧವಾಗಿದ್ದು ಸರ್ವಾಧಿಕಾರ ಧೋರಣೆ ಎಂಬುದನ್ನು ಸಾರ್ವಜನಿಕ ಚರ್ಚೆಗೆ ಇಡಬೇಕು ಎಂಬ ವಾದವು ಸಭೆಯಲ್ಲಿ ವ್ಯಕ್ತವಾಗಿದೆ.
ವೈದ್ಯರ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡಕೇಂದ್ರ ಮತ್ತು ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಖಾಸಗಿ ಆಸ್ಪತ್ರೆಗಳ ವೈದ್ಯರು, ಶುಶ್ರೂಷಕರು, ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ಸಿಬಂದಿ ಮೇಲಿನ ಹಲ್ಲೆ, ದೌರ್ಜನ್ಯ ಪ್ರಕರಣಗಳಲ್ಲಿ ಕ್ರಮ ಜರುಗಿಸಲು ಅನುಕೂಲವಾಗುವಂತೆ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ-2024ಕ್ಕೆ ಅನುಮೋದನೆ ಕೊಟ್ಟಿದೆ. ಕರ್ನಾಟಕ ವೈದ್ಯೋಪಚಾರ ಸಿಬಂದಿ ಮೇಲೆ ಹಿಂಸಾಚಾರವನ್ನು ಮತ್ತು ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸಿದೆ. ವೈದ್ಯಕೀಯ ಸೇವೆ ನೀಡುವ ಯಾವುದೇ ಸಂಸ್ಥೆಯ ಮೇಲೆ ದಾಳಿ ನಡೆಸಿ, ಅಲ್ಲಿನ ವಸ್ತುಗಳನ್ನು ಹಾನಿಗೊಳಪಡಿಸಿದರೂ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧ ಸಾಬೀತಾದರೆ ಅಂತಹವರಿಗೆ 3 ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹವಾಸ ಶಿಕ್ಷೆ ಹಾಗೂ 50 ಸಾವಿರ ರೂ.ವರೆಗೆ ವಿಸ್ತರಿಸಬಹುದಾದ ದಂಡವನ್ನು ವಿಧಿಸಬಹುದಾಗಿದೆ. ಜತೆಗೆ ದಾಳಿಕೋರನು ಹಾನಿಗೊಳಪಡಿಸಿದ ವೈದ್ಯಕೀಯ ಉಪ ಕರಣದ ಮೂಲಬೆಲೆಯ ಎರಡರಷ್ಟು ಹಣವನ್ನು ಪರಿಹಾರದ ರೂಪದಲ್ಲಿ ವಸೂಲಿ ಮಾಡಬಹುದಾಗಿದೆ.