Advertisement
ಇಷ್ಟು ದಿನ ಪಾಲಿಕೆಯ ಮೇಯರ್ ಅವರ ಕಚೇರಿ, ಆಡಳಿತಾಧಿಕಾರಿ ಹಾಗೂ ವಿರೋಧ ಪಕ್ಷದ ನಾಯಕರು ಕಚೇರಿಗಳು ಹಾಗೂ ಪಾಲಿಕೆಯ 12 ಸ್ಥಾಯಿ ಸಮಿತಿಯ ಕಚೇರಿಗಳು ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ತುಂಬಿಕೊಂಡಿರುತ್ತಿತ್ತು. ಶುಕ್ರವಾರದಿಂದ ಈ ಕಚೇರಿಗಳು ಸಹಜ ಕಳೆ ಕಳೆದುಕೊಳ್ಳಲಿವೆ. ಅವರ ಕಾರುಗಳು ಹಾಗೂ ಬೆಂಬಲಿಗರಿಲ್ಲದೆ. ಸಂಭ್ರಮದ ಕಾರ್ಯಕ್ರಮವಾದ ಮೇಲೆ ಕಾಣಿಸುವ ಮನೆಯಂತಹ ವಾತಾವರಣ ಸೃಷ್ಟಿಯಾಗಲಿದೆ.
Related Articles
Advertisement
ನಿಗದಿತ ಸಮಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲಿ : ರಾಜ್ಯ ಸರ್ಕಾರ ಕೋವಿಡ್ ಹಾಗೂ ಕಾನೂನು ತಿದ್ದುಪಡಿಯ ನೆಪ ಹೇಳಿ ಬಿಬಿಎಂಪಿ ಚುನಾವಣೆ ಮುಂದೂಡದೆನಿಗದಿತ ಸಮಯದಲ್ಲಿ ಚುನಾವಣೆ ನಡೆಸಬೇಕು ಎಂದು ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಬಿಎಂಪಿ ಚುನಾವಣೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ತಿಳಿಸಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಆದರೆ ಸರ್ಕಾರ ಇದಕ್ಕೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ವಾರ್ಡ್ ವಿಂಗಡಣೆ, ಮೀಸಲಾತಿ ಬದಲಾವಣೆ ಮುಂದೂಡಿದೆ. ರಾಜ್ಯದಲ್ಲಿ ಕೊರೊನಾ ಹಾಗೂ ಅತಿವೃಷ್ಟಿ ಹೆಚ್ಚಾಗಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹಿಂದೇಟು ಹಾಕುತ್ತಿದೆ. ರಾಜ್ಯ ಚುನಾವಣಾ ಆಯೋಗ ಸಂವಿಧಾನಕ್ಕನ್ನುಗುಣವಾಗಿ ಚುನಾವಣೆ ನಡೆಸಬೇಕು. ಬೆಂಗಳೂರಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ವಿಕೇಂದ್ರಿಕರಣ ದೃಷ್ಠಿಯಿಂದ ಚುನಾವಣೆ ನಡೆಸಬೇಕು. ಪಾಲಿಕೆ ಸದಸ್ಯರಿಂದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಸಮಸ್ಯೆಗಳಿಗೆ ಪರಿಹಾರ ಕಷ್ಟವಾಗಲಿದೆ. ಹೀಗಾಗಿ ಸರ್ಕಾರ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಲಮಿತಿಯಲ್ಲಿ ಬಿಬಿಎಂಪಿ ಚುನಾವಣೆ: ಅಶ್ವತ್ಥ ನಾರಾಯಣ : ಪಾಲಿಕೆಯ ಚುನಾವಣೆ ಕಾಲಮಿತಿಯ ಒಳಗಾಗಿ ಚುನಾವಣೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಬೆಂಗಳೂರಿನ ಜನರ ಹಿತದೃಷ್ಟಿಯಿಂದ ಸರ್ಕಾರ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡುತ್ತಿದ್ದು, ಕಳೆದ ಅಧಿವೇಶನದಲ್ಲಿ ವರದಿ ಮಂಡಿಸಲಾಗಿದೆ. ಜಂಟಿ ಸದನ ಸಮಿತಿಯಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿದ್ದು, ಶೀಘ್ರ ಜಾರಿ ಮಾಡಲಾಗುವುದು ಎಂದರು. ಕೆಎಂಸಿ ಕಾಯ್ದೆ ಪ್ರಕಾರ ಮುಂದಿನ ಚುನಾವಣೆ 198 ವಾರ್ಡ್ ಗಳಿಗೆ ನಡೆಯಲಿದೆ. ಆದರೆ, ಹೊಸ ಕಾಯ್ದೆ ಜಾರಿಯಾದರೆ ಅದರಲ್ಲಿ ಸೂಚಿಸಿದಂತೆ ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆಎಂದು ಮಾಹಿತಿ ನೀಡಿದರು. ಇನ್ನು ನಗರದಲ್ಲಿ ಮಳೆ ಅನಾಹುತಕ್ಕೆಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಳೆಗಾಲದಲ್ಲಿನಗರದಲ್ಲಿ ಸೃಷ್ಟಿಯಾಗುವ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಇಂಗು ಗುಂಡಿಗಳನ್ನು ರಚನೆಗೆ ಒತ್ತು ನೀಡಿ ರಾಜಕಾಲುವೆಯಲ್ಲಿ ನೀರು ಹರಿಯುವ ಸಾಮರ್ಥ್ಯ ಹೆಚ್ಚಿಸುತ್ತೇವೆ. ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಾಕಿ ಉಳಿದಿರುವ ಭಾಗದಲ್ಲೂ ಒತ್ತುವರಿ ತೆರವು ಮಾಡುತ್ತೇವೆ ಎಂದರು