Advertisement
ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪರಿವರ್ತನಾ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಬಿಬಿಎಂಪಿಗೆ 108.55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಈ ಅನುದಾನದಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಮತ್ತು ಜೈವಿಕ ಅನಿಲ ಘಟಕಗಳಿಗೆ ವಿದ್ಯುತ್ ಒದಗಿಸಲು ಬಳಸುವಂತೆ ಆದೇಶಿಸಿತ್ತು.
ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಅದೇ ರೀತಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಇಡೀ ರಾಜ್ಯಕ್ಕೆ 796 ಕೋಟಿ ರೂ.ಅನುದಾನವನ್ನು ಕೇಂದ್ರ ಸರ್ಕಾರ ಈವರೆಗೂ ಬಿಡುಗಡೆ ಮಾಡಿದೆ. ಈ ಅನುದಾನವನ್ನು ನಿಯಮ ಬಾಹಿರವಾಗಿ ಬೇರೆ ಕಾಮಗಾರಿಗಳಿಗೆ ಬಳಸಿಕೊಳ್ಳಲಾಗಿದೆ. ಇದರ ವಿರುದಟಛಿ ಪಕ್ಷದ ಕಾರ್ಯಕರ್ತರೊಬ್ಬರು ಇಂದು ಲೋಕಾಯುಕ್ತ,ಭ್ರಷ್ಟಾಚಾರ ನಿಗ್ರಹದಳ ಹಾಗೂ ಸಿಬಿಐಗೆ ದೂರು ಸಲ್ಲಿಸಿದ್ದಾರೆ ಎಂದರು.
Related Articles
Advertisement
ಮಲಪ್ರಭಾ ಮತ್ತು ಘಟಪ್ರಭಾ ನಾಲೆ ನಿರ್ಮಾಣಕ್ಕೆ 4 ತಿಂಗಳ ಹಿಂದೆ ರಾಜ್ಯ ಸರ್ಕಾರ 600 ಕೋಟಿ ರೂ.ಗಳಿಗೆ ಟೆಂಡರ್ ಕರೆಯಲು ಸಿದಟಛಿತೆ ಮಾಡಿಕೊಂಡಿತ್ತು. ಆಗ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಈಗ ಏಕಾಏಕಿ ಟೆಂಡರನ್ನು 1100 ಕೋಟಿ ರೂ.ಗೆ ಹೆಚ್ಚಳಗೊಳಿಸಿ, ಕದ್ದು ಮುಚ್ಚಿಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರೊಂದಿಗೆ ಒಳಒಪ್ಪಂದ ಮಾಡಿಕೊಂಡಿರುವುದರಿಂದ ಸಮಗ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು. ರಾಜ್ಯದ ಖಜಾನೆಯನ್ನು ಲೂಟಿ ಮಾಡಿದ್ದರಿಂದ ಶಾಸಕರ ಆಪ್ತ ಕಾರ್ಯದರ್ಶಿಗಳಿಗೆ ಸಂಬಳ ಕೊಡಲು ಇದುವರೆಗೂ ಸಾಧ್ಯವಾಗಿಲ್ಲ. ಬೊಕ್ಕಸ ಖಾಲಿಯಾಗಿರುವುದರಿಂದಲೇ ಬಿಬಿಎಂಪಿಯ ನಿವೇಶನಗಳ ಮೇಲೆ ಸಾಲ ಪಡೆಯಲಾಗಿದೆ
ಎಂದು ದೂರಿದರು. ಇದೇ ವೇಳೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ನೀಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಯಡಿಯೂರಪ್ಪ, ಶೇ.1ರ ಬಡ್ಡಿದರದಲ್ಲಿ ಸಾಲ ನೀಡುವ ಭರವಸೆ ನೀಡಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ರವಿಕುಮಾರ್, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ ಇತರರು ಉಪಸ್ಥಿತರಿದ್ದರು.