Advertisement

ಶೇ.50ರಷ್ಟು ಬೆಡ್ ನೀಡಲು ಒಪ್ಪದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ತುರ್ತು ನೋಟಿಸ್

07:27 PM Apr 21, 2021 | Team Udayavani |

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದ ಅಡಿ ಚಿಕಿತ್ಸೆ ನೀಡಲು, ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಲು ನಿರಾಕರಿಸಿದ 66 ಆಸ್ಪತ್ರೆಗಳಿಗೆ ಕಾರಣ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

Advertisement

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದ ಅಡಿ ಬಿಟ್ಟುಕೊಡುವಂತೆ ಈಗಾಗಲೇ ಒಮ್ಮೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಹಾಸಿಗೆ ಬಿಟ್ಟುಕೊಡಲು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್‌ಗೆ ಪ್ರತಿಕ್ರಿಯಿಸದೆ ಇದ್ದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ :ಸಾರಿಗೆ ನೌಕರರ ಪ್ರತಿಭಟನೆ: 30 ಮಂದಿ ಪ್ರೊಬೇಷನರಿ ಸಿಬ್ಬಂದಿ ವಜಾ

ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಅವರು, ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡುತ್ತಿರುವುದು ಅವರಿಗೆ ಸಮಸ್ಯೆ ನೀಡಲು ಅಲ್ಲ. ಸಕಾಲದಲ್ಲಿ ಅವರು ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಟ್ಟರೆ ಸೋಂಕಿತರ ಪರದಾಟವನ್ನು ತಪ್ಪಿಸಬಹುದಾಗಿದೆ. ಕೆಲವು ಖಾಸಗಿ ಆಸ್ಪತ್ರೆಗಳು ಗಂಭೀರ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಹಂತ – ಹಂತವಾಗಿ ಹಾಸಿಗೆಗಳನ್ನು ಬಿಟ್ಟುಕೊಡುವುದಾಗಿ ಹೇಳಿದ್ದವು. ಇದರಂತೆ ಹಾಸಿಗೆಗಳನ್ನು ಕೆಲವರು ಹಾಸಿಗೆ ಬಿಟ್ಟುಕೊಡುತ್ತಿದ್ದಾರೆ. ಆದರೆ, ಇನ್ನೂ ಕೆಲವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ, ಇದೀಗ ತುರ್ತು ನೋಟಿಸ್ ಜಾರಿ ಮಾಡಲಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡದೆ ಇದ್ದರೆ ಮತ್ತು ಸಕಾಲದಲ್ಲಿ ಶೇ.50ರಷ್ಟು ಹಾಸಿಗೆ ಬಿಟ್ಟುಕೊಡದೆ ಇದ್ದರೆ, ಮುಲಾಜಿಲ್ಲದೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next