Advertisement

BBMP ಕಚೇರಿಯಲ್ಲಿ ಅಗ್ನಿ ಅವಘಡ ; ಹಲವು ಸಿಬಂದಿಗಳಿಗೆ ಗಂಭೀರ ಗಾಯ

05:21 PM Aug 11, 2023 | Team Udayavani |

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಮಂದಿ ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

Advertisement

ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಎಂಟರಿಂದ ಹತ್ತು ಮಂದಿ ಕಾರ್ಮಿಕರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next