Advertisement

BBMP ಅಗ್ನಿ ಅವಘಡಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಡಿ.ಕೆ.ಶಿವಕುಮಾರ್

06:27 PM Aug 12, 2023 | Team Udayavani |

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು.

ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಿಬಿಎಂಪಿ ಸಿಬಂದಿಗಳಿಬ್ಬರು ಪರಾರಿಯಾಗಿದ್ದರು. ಅವರನ್ನು ಬಂಧಿಸಲಾಗಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಅವರು ಓಡಿಹೋಗಿದ್ದರು. ಅಲ್ಲಿ ಸುರಕ್ಷತಾ ಉಪಕರಣಗಳು ಲಭ್ಯವಿದ್ದ ಕಾರಣ ಅವರು ಘಟನೆಯ ನಂತರ ಬೆಂಕಿಯನ್ನು ನಂದಿಸಬಹುದಿತ್ತು”ಎಂದು ತಿಳಿಸಿದರು.

ಮೂರು ವಿಚಾರಣೆಗಳು ಏಕಕಾಲದಲ್ಲಿ ನಡೆಯುತ್ತಿವೆ. ಒಂದು ಬಿಬಿಎಂಪಿಯಿಂದ ಇಲಾಖಾ ವಿಚಾರಣೆ, ಎರಡನೆಯದು ಪೊಲೀಸ್ ತನಿಖೆ ಮತ್ತು ಮೂರನೆಯದು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆಯೇ ಎಂದು ತನಿಖೆ ಮಾಡಲು ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್ ಮಾಡಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

Advertisement

”ನನ್ನ ಪ್ರಕಾರ, ಕ್ವಾಲಿಟಿ ಕಂಟ್ರೋಲ್ ಲ್ಯಾಬ್ ದಾಖಲೆಗಳನ್ನು ಸಂಗ್ರಹಿಸುವ ಸ್ಥಳವಲ್ಲ ಆದರೆ ಅದನ್ನು ಮಾಡಲಾಗಿದೆ.ಅದಕ್ಕೆ ಯಾರನ್ನು ದೂಷಿಸುವುದು? ಈಗಾಗಲೇ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಈ ಪ್ರಯೋಗಾಲಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ,” ಎಂದರು.

ಅವಘಡದ ವೇಳೆ ಹಾಜರಿದ್ದ ಗ್ರೂಪ್-ಡಿ ನೌಕರನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

2019 ರಿಂದ 2023 ರವರೆಗೆ ಬಿಜೆಪಿ ಆಡಳಿತದ ಅವಧಿಯಲ್ಲಿ ಬಿಬಿಎಂಪಿಯಲ್ಲಿ ನಡೆದ ಎಲ್ಲಾ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಸರಕಾರ ಆದೇಶಿಸಿದ ಕೆಲವೇ ದಿನಗಳಲ್ಲಿ ಅಗ್ನಿ ಅವಘಡ ನಡೆದಿದೆ.

ಯತ್ನಾಳ್ ಟ್ವೀಟ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ x (ಟ್ವೀಟ್) ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಹೇಗೆ ಆರೋಪ ಮಾಡಿ ಓಡಿ ಹೋಗುವುದು ರೂಢಿಯೊ ಹಾಗೆ ಅವರ ಟ್ವಿಟ್ಟರ್ ಹ್ಯಾಂಡಲ್ ಸಹ!. ಲಂಗು ಲಗಾಮು ಇಲ್ಲದ ಅಯೋಗ್ಯರು ಬಾಯಿಗೆ ಬಂದದ್ದು ಬರೆಯುವುದು ಅದರ ಸತ್ಯತೆಯ ಬಗ್ಗೆ ನಾವು ಬರೆದಾಗ ಟ್ವೀಟ್ ಡಿಲೀಟ್ ಮಾಡಿ ಓಡಿ ಹೋಗುವುದು. ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಮಹಾನುಭಾವ ಒಬ್ಬರಿದ್ದರಲ್ಲವೇ? ಎಲ್ಲಿ ಮಾಯವಾಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಡಿಕೆಶಿ ಉತ್ತರ

ಯಾರೋ ಹುಡುಗರು ಟ್ವೀಟ್ ಪೋಸ್ಟ್ ಮಾಡಿದ್ದಾರೆ. ನೋಡಿದ ಕೂಡಲೇ ನಾವು ಅದನ್ನು ಹಿಂದಕ್ಕೆ ಪಡೆದಿದ್ದೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next