Advertisement

ಬಿಬಿಎಂಪಿ ಹೃದಯಾಲಯ ಶೀಘ್ರ ಆರಂಭ

12:02 PM Feb 03, 2017 | Team Udayavani |

ಬೆಂಗಳೂರು: ಬಿಬಿಎಂಪಿ ಮತ್ತು ನಾರಾಯಣ ಹೃದಯಾಲಯದ ಸಹಯೋಗದಲ್ಲಿ ಶಿವಾಜಿನಗರದದ ಬ್ರಾಡ್‌ವೇ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ “ಬಿಬಿಎಂಪಿ-ನಾರಾಯಣ ಹೃದಯಾಲಯ’ ಅತಿ ಶೀಘ್ರದಲ್ಲೇ ಕಾರ್ಯಾರಂಭವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಆರ್‌.ರೋಷನ್‌ ಬೇಗ್‌ ತಿಳಿಸಿದ್ದಾರೆ. 

Advertisement

ವಸಂತನಗರ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಂಗಳೂರು ಒನ್‌ ಪೂರ್ವ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಸಲುವಾಗಿ ಈ ಹೃದಯಾಲಯ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ಬಿಬಿಎಂಪಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುತ್ತಿದೆ, ಇತರೆ ಸಲಕರಣೆಗಳನ್ನು ನಾರಾಯಣ ಹೃದಯಾಲಯ ಒದಗಿಸಲಿದೆ ಎಂದು ಹೇಳಿದರು. 

ಮತ್ತೂಂದು ವೈದ್ಯಕೀಯ ಕಾಲೇಜಿಗೆ ಮನವಿ: ಬೆಂಗಳೂರಿನಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜಿದೆ. ಹಾಗಾಗಿ ಬೌರಿಂಗ್‌ ಆಸ್ಪತ್ರೆಯಲ್ಲಿ ಮತ್ತೂಂದು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿತ್ತು. ಅದಕ್ಕೆ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಇದೇ ವೇಳೆ ರೋಷನ್‌ ಬೇಗ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next