Advertisement
ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಬೆಳಗ್ಗೆ 8ಕ್ಕೆ ಚುನಾವಣೆ ನಡೆಯಬೇಕಿತ್ತು. ಆದರೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಯಾವೊಬ್ಬ ಸದಸ್ಯರೂ ನಾಮಪತ್ರ ಸಲ್ಲಿಸಲಿಲ್ಲ ಹಾಗೂ ಕೋರಂ ಕೂಡ ಇರಲಿಲ್ಲ. ಹೀಗಾಗಿ, ಚುನಾವಣಾಧಿಕಾರಿ ಜಯಂತಿ ಅವರು ನವೆಂಬರ್ 10ಕ್ಕೆ ಚುನಾವಣೆ ಮುಂದೂಡಿದರು. ಈ ಮೂಲಕ ಸತತ ಎರಡನೇ ಬಾರಿ ಚುನಾವಣೆ ಮುಂದೂಡಿದಂತಾಯಿತು.
Related Articles
ನವೆಂಬರ್ 10ಕ್ಕೆ ನಡೆಯಲಿರುವ ಚುನಾವಣೆಗೆ ನ. 9ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆ ಬಯಸುವರು ನ. 9ರ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಕೌನ್ಸಿಲ್ ಕಾರ್ಯದರ್ಶಿ ಬಳಿ ನಾಮಪತ್ರ ಸಲ್ಲಿಸಲು ತಿಳಿಸಲಾಗಿದೆ.
Advertisement
ಬಿಜೆಪಿ ಸದಸ್ಯರು ನ. 2ರಂದು ಬಿಜೆಪಿ ರ್ಯಾಲಿ ಇದೆ. ಆದ್ದರಿಂದ ಸ್ಥಾಯಿ ಸಮಿತಿಯ ಸದಸ್ಯರ ಆಯ್ಕೆಯ ಚುನಾವಣೆ ಮುಂದೂಡಲು ಸಹಕರಿಸಿ ಎಂದು ಕೋರಿದ್ದರು. ಅದರಂತೆ ನಾವ್ಯಾರೂ ನಾಮಪತ್ರ ಸಲ್ಲಿಸಿಲ್ಲ. ಉಳಿದಂತೆ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಆಡಳಿತ ಪಕ್ಷದ ನಾಯಕ ಮಹಮದ್ ರಿಜ್ವಾನ್ ಸ್ಪಷ್ಟಪಡಿಸಿದರು.
ಈ ನಡುವೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಹಂಚಿಕೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಗೊಂದಲ ಮುಂದುವರಿದಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಹಿರಿಯ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.