ಹಿರೇಕೆರೂರ: ಮಗ ಮತ್ತು ಮಗಳು ಇಬ್ಬರೂ ಸಮಾನರು ಎನ್ನುವುದು ನಮ್ಮ ಮಂತ್ರವಾಗಿರಬೇಕೆಂಬ ಉದ್ದೇಶದಿಂದ ಪ್ರಧಾನಿ ಮೋದಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಹೆಣ್ಣು ಮಕ್ಕಳ ಜನನವನ್ನು ನಾವು ಖುಷಿಯಿಂದ ಸಂಭ್ರಮಿಸಬೇಕೆಂಬ ಪ್ರಧಾನಿಯವರ ಕರೆ ಪಾಲಿಸಬೇಕು ಎಂದರು.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಆರಂಭಿಸಿದ ಬಳಿಕ ಬಹುತೇಕ ಎಲ್ಲ ರಾಜ್ಯಗಳಲ್ಲೂ ಬಹುಸ್ತರೀಯ ಜಿಲ್ಲಾ ಕಾರ್ಯ ಯೋಜನೆ ಜಾರಿಗೆ ತರಲಾಗಿದೆ. ಯೋಜನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನದ ಕುರಿತು ಬೀದಿ ನಾಟಕ ಆಯೋಜಿಸಿ, ಸಮುದಾಯಗಳನ್ನು ದೊಡ್ಡ ಮಟ್ಟದಲ್ಲಿ ತಲುಪಲು, ಸರ್ಕಾರಿ ಇಲಾಖೆ ಬಳಸಿಕೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಇಲಾಖೆ ವತಿಯಿಂದ ಸರ್ಕಾರ ಹಲವು ಸಮಾವೇಶ ಆಯೋಜಿಸಿ ಜಾಗೃತಿ ಮೂಡಿಸುತ್ತಿದೆ ಎಂದರು.
ಇದನ್ನೂ ಓದಿ :ಬ್ಯಾಡಗಿ ಮಾರುಕಟ್ಟೆಗೆ 1,97,796 ಮೆಣಸಿನಕಾಯಿ ಚೀಲ ಆವಕ
ಈ ವೇಳೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಜಿಪಂ ಸದಸ್ಯ ಎನ್.ಎಂ. ಈಟೇರ, ತಾಪಂ ಅಧ್ಯಕ್ಷ ಬಂಗಾರೆಪ್ಪ ಇಕ್ಕೇರಿ, ಉಪಾಧ್ಯಕ್ಷೆ ಸುಜಾತಾ ಕೊಟಗಿಮನಿ, ಗ್ರಾಪಂ ಅಧ್ಯಕ್ಷೆ ಕಾವ್ಯಾ ಹಿತ್ತಲಮನಿ, ಎಪಿಎಂಸಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಸಿಡಿಪಿಒ ವಿಜಯಕುಮಾರ, ಎಸಿಡಿಪಿಒ ಗೀತಾ ಬಾಳಿಕಾಯಿ, ಪಿಡಿಒ ರಂಗಪ್ಪ ವಾಲ್ಮೀಕಿ ಇತರರಿದ್ದರು.