Advertisement

ಕಾಂಗ್ರೆಸ್ ನಾಯಕರು ತಮಿಳುನಾಡು ವಿರುದ್ಧ ಪ್ರತಿಭಟನೆ ಮಾಡಲಿ : ಬಿ.ಸಿ. ಪಾಟೀಲ್ ಸವಾಲು

03:03 PM Jan 12, 2022 | Team Udayavani |

ಕಲಬುರಗಿ: ಮೇಕೆದಾಟು ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನಮ್ಮ ರಾಜ್ಯ ಸರ್ಕಾರದ ‌ವಿರುದ್ಧ ಪ್ರತಿಭಟನಾ ಪಾದಯಾತ್ರೆ ನಡೆಸುವ ಬದಲು ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸವಾಲು ಹಾಕಿದರು.

Advertisement

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಯೋಜನೆ ಜಾರಿಗೆ ಏನು ಮಾಡಬೇಕೋ ಅದನ್ನು ಮಾಡಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಅನಗತ್ಯವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ . ಈಗಾಗಲೇ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಡಿಕೆಶಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು.‌ ಕಾನೂನು ಮುಂದೆ ಎಲ್ಲರೂ ಸಮಾನರು ಎಂಬುದನ್ನು ಅರಿಯಲಿ.‌ ಪಾದಯಾತ್ರೆಗೆ ಸರ್ಕಾರ ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಲು ಡಿ.ಕೆ.ಶಿವಕುಮಾರ್ ‌ದುಡ್ಡು ಖರ್ಚು ಮಾಡಿ ಪಾದಯಾತ್ರೆ ನಡೆಸುತ್ತಿದ್ದಾರೆ. ಮೇಕೆದಾಟು ಬಗ್ಗೆ ಇಷ್ಟೊಂದು ಆಸಕ್ತಿ ವಹಿಸಿರುವ ಕಾಂಗ್ರೆಸ್ ನವರು ಹಿಂದೆ ಸೋನಿಯಾ ಗಾಂಧಿ ಅವರು ಮಹದಾಯಿಯಲ್ಲಿ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡುವುದಿಲ್ಲ ಎಂದಾಗ ಏಕೆ ಮೌನವಾಗಿದ್ದರು. ಕಾವೇರಿ ಬಗ್ಗೆ ಇರುವ ಆಸಕ್ತಿ ಮಹದಾಯಿ, ಕೃಷ್ಣಾಕ್ಕೆ ಇಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಹುಬ್ಬಳ್ಳಿ: ಖಾಸಗಿ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಕಲಬುರಗಿ ನಗರದಲ್ಲಿ ಕೃಷಿ ಇಲಾಖೆಯ ವತಿಯಿಂದ ₹ 9.80 ಕೋಟಿ ವೆಚ್ಚದಲ್ಲಿ ಶೀಥಲೀಕರಣ ಘಟಕಕ್ಕೆ ಮಂಜೂರಾತಿ ದೊರಕಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದು ಕಲ್ಯಾಣ ಕರ್ನಾಟಕದ ದೊಡ್ಡ ಶಿಥಲೀಕರಣವಾಗಲಿದೆ ಎಂದು ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next