Advertisement
ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಕೃಷಿ ಸಚಿವರು.
Related Articles
Advertisement
ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ. ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ. ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ. ಅದರಂತೆ ಹಣ್ಣು, ಹೂವು, ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು. ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ. ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.
ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.