Advertisement
ವಿಕಾಸಸೌಧದಲ್ಲಿ ಜರಗಿದ ಕೃಷಿ ನವೋದ್ಯಮ (ಅಗ್ರಿ ಸ್ಟಾರ್ಟಫ್) ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನವು ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು. ಇಂದಿನ ಪರಿಸ್ಥಿತಿಯಲ್ಲಿ ಯುವ ಸಮುದಾಯವನ್ನು ಕೃಷಿಯತ್ತ ಸೆಳೆಯಲು ನಾವು ಹೊಸತನಕ್ಕೆ ಮುನ್ನಡೆಯಬೇಕಿದೆ ಎಂದು ಹೇಳಿದರು.
Related Articles
ಸ್ಟಾರ್ಟಪ್ ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದೂ ಗುರುತಿಸಲ್ಪಟ್ಟಿದೆ.
Advertisement
ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಹೇಳಿದರು ಜೇವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾ ಫುಡ್ ಪಾರ್ಕ್ ಗಳಿದ್ದು, ಕೇಂದ್ರ ಸರಕಾರದಡಿ ಕೆ. ಆರ್. ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾ ಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಹಾಗೂ ಆಹಾರ ಉತ್ಪಾದನೆ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನೆಗೆ ಸಂಬಂಧಿಸಿದ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.
ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಖುಷಿ ತಂದಿದೆ. ಕೊರೊನಾ ವೈರಸ್‌ನಿಂದಾಗಿ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ ತರಕಾರಿ ಹಣ್ಣು ಸಹಿತ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೋಲ್ಡ್ ಸ್ಟೋರೇಜ್‌ಗಳನ್ನು ಆರಂಭಿಸಲಾಯಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಬೆಂಬಲ ಸಹಕಾರ ಸೂಚನೆಯಡಿ ಕೃಷಿ ಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ವೆಬಿನಾರ್ ಮೂಲಕ ತಜ್ಞರ ಜತೆ ಸಚಿವರು ಸಂವಾದ ನಡೆಸಿದರು. ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜ್‌ಕುಮಾರ್ ಕತ್ರಿ, ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಉಪಸ್ಥಿತರಿದ್ದರು.