ಬೆಂಗಳೂರು : ನಾನು ರೈತರನ್ನು ಹೇಡಿ ಎಂದು ಎಂದಿಗೂ ಸಂಬೋಧಿಸಿಲ್ಲ.ಆತ್ಮಹತ್ಯೆಯಂತಹ ಕೆಲಸ ಹೇಡಿತನದ್ದು ಎಂದಿದ್ದೇನೆ. ಯಾರೇ ಆಗಲೀ ಆತ್ಮಹತ್ಯೆಯಂತಹ ಹೇಡಿತನದ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಹೇಳಿಕೆಗೆ ಸಮರ್ಥನೆಯನ್ನು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು ರೈತರು ಕಷ್ಟನಷ್ಟಗಳನ್ನು ಈಜಿ ಜಯಿಸಬೇಕು.ಕಷ್ಟಗಳು ಇಂದಿದ್ದಂತೆ ನಾಳೆ ಇರುವುದಿಲ್ಲ.ಕತ್ತಲಾದ ಮೇಲೆ ಬೆಳಕು ಬಂದೇ ಬರುತ್ತದೆ.
ಕೋಲಾರ ಜಿಲ್ಲೆಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಸಮಗ್ರ ಕೃಷಿ ನೀತಿಯನ್ನು ಅಳವಡಿಸಿಕೊಂಡು ಮಾದರಿಯಾಗಿದ್ದಾರೆ. ಕೋಲಾರ ರೈತರು ಮಾದರಿ ಎಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆಯ ಮನಸ್ಥಿತಿ, ಎರಡೂ ಒಂದೇ: ಬಿಜೆಪಿ
ರೈತರ ಆತ್ಮಹತ್ಯೆ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.ಸಮಗ್ರ ಕೃಷಿ ನೀತಿಯನ್ನು ರೈತರು ಹೆಚ್ಚೆಚ್ಚು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.