ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಭೂಮಿಪೂಜೆ ನೆರವೇರಿಸಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಲು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ಎಲ್ಲ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಮಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡುವ ಮೂಲಕ ಸ್ವತ್ಛ ಪರಿಸರ ನಿರ್ಮಾಣ ಮಾಡುವ ಜತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ನಂತರ ರಟ್ಟಿàಹಳ್ಳಿ ವೀರಭದ್ರೇಶ್ವರ ದೇವಸ್ಥಾನದ ಬಳಿ 15 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಹಿರೇಮಾದುಪುರ ಗ್ರಾಮದಲ್ಲಿ 37 ಲಕ್ಷ ರೂ.ವೆಚ್ಚದ ಕಾಂಕ್ರೀಟ್ ರಸ್ತೆ, ಯಡಗೋಡಿ, ಕುಂಚೂರು, ಬತ್ತಿಕೊಪ್ಪ, ಹಿರೇಯಡಚಿ ಗ್ರಾಮಗಳಲ್ಲಿ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಚಿಕ್ಕಯಡಚಿ ಗ್ರಾಮದಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಮತ್ತು ದೊಡ್ಡಗುಬ್ಬಿ, ಚಿಕ್ಕಯಡಚಿ ಗ್ರಾಮಗಳಲ್ಲಿ ಡಾ| ಅಂಬೇಡ್ಕರ್ ಭವನ ಉದ್ಘಾಟನೆ, ದೊಡ್ಡಗುಬ್ಬಿಯಲ್ಲಿ ಅಂಜುಮನ್ ಸಭಾಭವನ, ಮಕರಿಯಲ್ಲಿ ಯೋಗಿನಾರಾಯಣ ಸಭಾಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ : ರಾಮ ಮಂದಿರಕ್ಕೆ ನಿಧಿ ಸಂಗ್ರಹ
ಈ ವೇಳೆ ಜಿಪಂ ಸದಸ್ಯ ಎನ್.ಎಂ. ಈಟೇರ, ಸುಮಿತ್ರಾ ಪಾಟೀಲ, ತಾಪಂ ಅಧ್ಯಕ್ಷ ಬಂಗಾರಪ್ಪ ಇಕ್ಕೇರಿ, ಸದಸ್ಯರಾದ ಮಹೇಶ ಗುಬ್ಬಿ, ಹೇಮಣ್ಣ ಮುದರಡ್ಡೇರ ಇತರರಿದ್ದರು.