Advertisement

ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಬಿ.ಸಿ.ಪಾಟೀಲ್‌ ಮನವಿ

08:23 PM Aug 10, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಭಗವಂತ ಖೂಬಾ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನವಿ ಮಾಡಿದ್ದಾರೆ.

Advertisement

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಅವರು, ಕೃಷಿ ಚಟುವಟಿಕೆಗಳಿಗೆ ಯೂರಿಯಾ ಸೇರಿದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಕೆ ಮಾಡುವಂತೆ ಕೋರಿದರು.

ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್‌ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಉತ್ತಮ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಕೇಂದ್ರದ ಉಭಯ ಸಚಿವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 1338 ಪಾಸಿಟಿವ್ ಪ್ರಕರಣ: 31 ಜನರು ಸಾವು

Advertisement

ಕಳೆದ ಬಾರಿಯಂತೆ ಈ ಬಾರಿಯೂ 10 ಸಾವಿರ ಮಿನಿಕಿಟ್‌ ಗಳನ್ನು ರಾಜ್ಯ ಬೀಜ ನಿಗಮ ಮೂಲಕ ನೀಡಲು ಕೇಂದ್ರ ಸರ್ಕಾರ ಹಂಚಿಕೆ ಮಾಡುವಂತೆ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಬರಗಾಲ ಸಂದರ್ಭದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಬಹಳ ಉಪಯುಕ್ತವಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ಯೋಜನೆಯಡಿ ಜಲಾನಯನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕ(ಸಾವಯವ ಕೃಷಿ) ವೆಂಟಕರಮಣರೆಡ್ಡಿ, ಸಾವಯವ ಮಿಷನ್‌ ಅಧ್ಯಕ್ಷ ಆನಂದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next