Advertisement

17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆಯಾಗಿದೆ ಎಂಬ ಈಶ್ವರಪ್ಪ ಮಾತು ಸರಿಯಲ್ಲ : ಪಾಟೀಲ್

04:18 PM Jun 15, 2021 | Team Udayavani |

ಮೈಸೂರು : ಸುತ್ತೂರು ಮಠಕ್ಕೆ ಸಚಿವ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್‌ ಭೇಟಿ ನೀಡಿ ಡಾ.ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

Advertisement

ಇದೇ ವೇಳೆ ಮಾತನಾಡಿದ ಬಿ.ಸಿ ಪಾಟೀಲ್, ಕೆಲವರು ನಾಯಕತ್ವ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಎಲ್ಲಾ ವಿಚಾರಗಳಿಗೂ ನಾಳೆ ತೆರೆ ಬೀಳಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಇವರ ಎಲ್ಲರಿಗೂ ತಿಳಿ ಹೇಳಲಿದ್ದಾರೆ. ಪಕ್ಷದಲ್ಲಿ ಗೊಂದಲಗಳಿದ್ದರೆ ಅದನ್ನ ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕು. ಈ‌ ನಿಟ್ಟಿನಲ್ಲಿ ಅರುಣ್ ಸಿಂಗ್ ಸೂಚನೆ ನೀಡಲಿದ್ದಾರೆ‌. ನಾಳೆ ಇದಕ್ಕೆಲ್ಲ ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದೇ ವೇಳೆ ಈಶ್ವರಪ್ಪ ಅವರಿಗೆ ಟಾಂಗ್ ನೀಡಿದ ಪಾಟೀಲ್, 17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆ ಆಗಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ್ದಾರೆ.  17 ಜನ ಬಿಜೆಪಿಗೆ ಬಂದ ಕಾರಣದಿಂದ ಸರ್ಕಾರ ಬಂದಿದೆ. ಸರ್ಕಾರ ಬಂದಿರುವ ಕಾರಣ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾರೆ. ಈಶ್ವರಪ್ಪ ಆ ರೀತಿ ಹೇಳಿಕೆ ಕೊಟ್ಟಿದ್ದರೆ ಅದು ಸರಿಯಲ್ಲ. ಅವರು ಆ ರೀತಿ ಮಾತನಾಡಿಲ್ಲ ಎಂದುಕೊಳ್ಳುತ್ತೇನೆ‌ ಎಂದರು.

ಇದೇ ವೇಳೆ ಮಾಧ್ಯಮದವರು ವಿ. ಸೋಮಣ್ಣ ಅವರನ್ನು ಪ್ರಶ್ನೆ ಮಾಡಿದ್ದಾರೆ. ಶಾಸಕ ಮುನಿರತ್ನ ಸಚಿವರಾಗುತ್ತಾರೆ ಎಂಬ ವಿವಾರದ ಬಗ್ಗೆ ಸೋಮಣ್ಣ ಅವರನ್ನು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನೆ ಹೊರಟು ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next