ಹಾವೇರಿ: ಇಂದು ಹಿರೇಕೇರೂರು ಕ್ಷೇತ್ರದಲ್ಲಿ 461 ಕೋಟಿ ರೂಪಾಯಿ ಕಾಮಗಾರಿಗಳಿಗೆ ಚಾಲನೆ ಕೊಡ್ತಿದ್ದೇವೆ
. 38 ಕೋಟಿ ರೂಪಾಯಿ ಮಡ್ಲೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗುತ್ತಿದ್ದಾರೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದರು.
ಹಿರೇಕೇರೂರಿನಲ್ಲಿ ಮಾತನಾಡಿದ ಅವರು,
2018 ರಲ್ಲಿ ಚುನಾಯಿತರಾಗಿ ನಾನು ಹಿರೇಕೇರೂರು ತಾಲೂಕಿಗೆ 1000 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ತಾಲೂಕಿಗೆ 6 ನೀರಾವರಿ ಯೋಜನೆ ತಂದಿದ್ದೇನೆ. ತಾಲೂಕಿನಲ್ಲಿ ಎಲ್ಲಾ ಕೆರೆಗಳು ಮಳೆಗಾಲದಲ್ಲಿ ತುಂಬುತ್ತವೆ. ನಮ್ಮ ತಾಲೂಕಿಗೆ ಬರಗಾಲ ಬರಲ್ಲ ಅದೊಂದು ತೃಪ್ತಿ ನನಗೆ ಇದೆ ಮಾತು ಕೊಟ್ಟಂತೆ ಮಹಿಳೆಯರಿಗೆ ಗಾರ್ಮೆಂಟ್ಸ್ ಮಾಡ್ತೀವಿ ಅಂದಿದ್ದೆ ಅದನ್ನೂ ಮಾಡಿದ್ದೇನೆ. ನಾನು ಏನು ಮಾಡಿದ್ದೀನಿ ಅಂತ ಕಿರು ಹೊತ್ತಿಗೆ ಬಿಡುಗಡೆ ಮಾಡುತ್ತೇನೆ. ಏನೇನು ಕೆಲಸ ಆಗಿದೆ ಅಂತ ಮನೆ ಮನೆಗೆ ಕಿರು ಹೊತ್ತಿಗೆ ಬಿಡುಗಡೆ ಮಾಡಿ, ಜನತೆಗೆ ಈ ಬಗ್ಗೆ ವರದಿ ಒಪ್ಪಿಸುವೆ ಎಂದರು.
ಯು ಬಿ ಬಣಕಾರ್ ಧಮ್ಮು ತಾಕತ್ತಿನ ಬಗ್ಗೆ ಮಾತಾಡಿದ್ದಾರೆ. ಅವರ ಧಮ್ಮು, ತಾಕತ್ತು ಮೂರು ಬಾರಿ ನೋಡಿ ಆಗಿದೆ, ಅವರ ದಮ್ಮು ಗೊತ್ತಾಗಿದೆ. ನನಗೆ ಧಮ್ ಇರೋದಕ್ಕೆ ಅವರಿಗೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ, ಒಂದು ಕಾರು, ರಾಜ್ಯ ಸಚಿವ ದರ್ಜೆ ಸ್ಥಾನ ಮಾನ ಬಂದಿತ್ತು. ಧಮ್ , ತಾಕತ್ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತದೆ. ಅವರು ಏನು ಕೆಲಸ ಮಾಡಿದಾರೆ ಅಂತ ಪುಸ್ತಕ ಬಿಡುಗಡೆ ಮಾಡಲಿ, ಆವಾಗ ಒಪ್ಪಿಕೊಳ್ಳುತ್ತೇನೆ ಎಂದರು.
ಇದನ್ನೂ ಓದಿ:
ಮೀರ್ ಸಾಧಿಕ್ ರಂಥ ಜನ ನಮ್ಮ ಸುತ್ತ ಮುತ್ತಲೇ ಇರ್ತಾರೆ. ಇದೇ ಬಣಕಾರ್ ನಮ್ ಜೊತೆಗೆ ಇದ್ದು ಈಗ ಕಾಂಗ್ರೆಸ್ ಸೇರಿದ್ದಾರೆ ಅಂಥವರಿಂದ ರಕ್ಷಣೆ ಅಗತ್ಯ. ನಾವು ವ್ಯಭಿಚಾರ ಏನು ಮಾಡಿಲ್ಲ. ರಮೇಶ್ ಜಾರಕಿಹೊಳಿಯವರದ್ದು ಅನವಶ್ಯ ಬಿಡುಗಡೆ ಮಾಡಿದರು. ಆದರೆ ಏನಾಯ್ತು? ಬಿ ರಿಪೋರ್ಟ್ ಆಯ್ತು. ನಾವು ನಮ್ಮ ಗೌರವ ಕಾಯುವ ಕೆಲಸ ಮಾಡಲೇಬೇಕು ಈಗ ಎಲ್ಲಾ ಎಲೆಕ್ಟ್ರಾನಿಕ್ ಮಾಧ್ಯಮದ ಕಾಲ, ಏನು ಬೇಕಾದರೂ ಮಾಡುತ್ತಾರೆ ಎಂದು ಹೇಳಿದರು.
ಸಿಜನತಾ ದಳದಲ್ಲಿ ಇದ್ದಿದ್ದರೆ ಕಾಲ ಕಸದಂತೆ ನೋಡುತ್ತಿದ್ದರು ಅಂತ ಸಿದ್ದರಾಮಯ್ಯ ಹೇಳಿದ್ದರು. ಅವರಿಗೆ ವಿರೋಧ ಪಕ್ಷದ ಸ್ಥಾನ ಸಿಕ್ಕಿದ್ದೇ ನಮ್ಮಿಂದ. ಅವರು ನಮಗೆ ಅಭಿನಂದನೆ ತಿಳಿಸಬೇಕು ಆದರೆ ಅವರು ಅಭಿನಂದನೆ ಆ ರೂಪದಲ್ಲಿ ಹೇಳ್ತಾರೆ ಅಷ್ಟೇ ಎಂದರು.