Advertisement

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

09:19 AM Sep 17, 2024 | Team Udayavani |

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮವನ್ನು ನಿಂದಿಸಿ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡುವವರ ಮೇಲೆ ಕಠಿನ ಕಾನೂನು ಕ್ರಮ ನೀಡುವಂತೆ  ಮಹಮ್ಮದ್ ರಫೀಕ್ ಕೆಳಗಿನಪೇಟೆ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement

ಮುಸ್ಲಿಂ ಧರ್ಮವನ್ನು ಮತ್ತು ಪುರಸಭೆಯ ಸದಸ್ಯ ಮಹಮ್ಮದ್ ಶರೀಫ್ ಅವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿದ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೆಲ್ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಸೆ.16ರಂದು ಬಿ.ಸಿ.ರೋಡಿನಲ್ಲಿ ಬಜರಂಗ ದಳ- ವಿಹಿಂಪ ಬಿ.ಸಿ.ರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೆಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಮತ್ತು  ಪ್ರಚೋದನಾಕಾರಿ ಭಾಷಣದಲ್ಲಿ  ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ‌ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಾಗಾಗಿ ಇವರಿಬ್ಬರ ಮೇಲೆ ಕಾನೂನು ಕ್ರಮ ಜರಗಿಸಿ ಎಂದು ಠಾಣೆಗೆ ದೂರು ನೀಡಿದ್ದಾರೆ.

ಮತ್ತೊಂದು ದೂರು ದಾಖಲು:

ಶಾಂತಿ ಭಂಗದ ಆರೋಪದಲ್ಲಿ ಯಶೋಧರ ಕರ್ಬೆಟ್ಟು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಎಂಬ ಆರೋಪದ ಮೇಲೆ ಯಶೋಧರ ಕರ್ಬೆಟ್ಟು ಎಂಬವರ ಮೇಲೆ ಕಾನೂನು ಕ್ರಮಜರಗಿಸುವಂತೆ  ಬಂಟ್ವಾಳದ ಮಹಮ್ಮದ್ ಸಪ್ನಾಜ್ ನವಾಜ್ ಅವರ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

Advertisement

ಪುರಸಭಾ ಸದಸ್ಯ ಮಹಮ್ಮದ್ ಶರೀಫ್ ಅವರ ಮೇಲೆ ಹಾಗೂ ಮುಸ್ಲಿಂ ಧರ್ಮವನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾನೆ. ಇದರಿಂದ ಎರಡು ಧರ್ಮಗಳ ನಡುವೆ ದ್ವೇಷ ಉಂಟಾಗಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next