Advertisement

ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ: ಕಲ್ಲಡ್ಕದಲ್ಲಿನ ಕಟ್ಟಡಗಳ ತೆರವು

02:23 AM Oct 11, 2021 | Team Udayavani |

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಫ್ಲೈ ಓವರ್‌ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯು ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ರವಿವಾರದ ವೇಳೆಗೆ ನೆಲಸಮಗೊಂಡಿವೆ.

Advertisement

ಬಿ.ಸಿ.ರೋಡು-ಅಡ್ಡಹೊಳೆ ಮಧ್ಯದ 64 ಕಿ.ಮೀ. ಚತುಷ್ಪಥ ಕಾಮಗಾರಿ 2 ಹಂತಗಳಲ್ಲಿ ನಡೆಯಲಿದ್ದು, ಪೂರ್ವಭಾವಿ ಪ್ರಕ್ರಿಯೆಗಳು ಆರಂಭಗೊಂಡಿದೆ. ಕಲ್ಲಡ್ಕದಿಂದ ಮೆಲ್ಕಾರ್‌ ವರೆಗೂ ಈ ಪ್ರಕ್ರಿಯೆ ನಡೆಯುತ್ತಿದೆ.

ಅಡ್ಡಹೊಳೆಯಿಂದ ಪೆರಿಯಶಾಂತಿ ಹಾಗೂ ಪೆರಿಯಶಾಂತಿಯಿಂದ ಬಿ.ಸಿ.ರೋಡು ವರೆಗೆ ಎರಡು ಹಂತದ ಕಾಮಗಾರಿ ನಡೆಯಲಿದ್ದು, ಕಲ್ಲಡ್ಕದಲ್ಲಿ ಫ್ಲೈ ಓವರ್‌ ನಿರ್ಮಾಣವಾಗಲಿದೆ.

ಕಲ್ಲಡ್ಕ ಪೇಟೆಯ ಹೆಚ್ಚಿನ ಕಟ್ಟಡಗಳು ಹೆದ್ದಾರಿಗಾಗಿ ತೆರವುಗೊಳ್ಳಲಿದ್ದು, ಅವುಗಳನ್ನು ಸ್ಥಳಾಂತರಗೊಳಿಸುವ ಕಾಮಗಾರಿಯೂ ನಡೆಯುತ್ತಿದೆ. ಕೆಲವು ಹಳೆಯ ಕಟ್ಟಡಗಳ ಹಿಂಭಾಗದಲ್ಲಿ ಹೊಸ ಕಟ್ಟಡಗಳು ನಿರ್ಮಾಣಗೊಳ್ಳುತ್ತಿದ್ದರೆ, ಮತ್ತೆ ಕೆಲವು ಪೇಟೆಯಿಂದ ಹೊರಭಾಗದಲ್ಲಿ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ:ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ

Advertisement

ಹಳೆಯ ಕೆಟಿ ಹೊಟೇಲ್‌ ಸ್ಥಗಿತ
ಕೆಟಿ ಚಹಾ ಮೂಲಕ ರಾಷ್ಟ್ರ ಮಟ್ಟದಲ್ಲಿ ಖ್ಯಾತಿಗಳಿಸಿದ್ದ ಕಲ್ಲಡ್ಕದ ಹಳೆಯ ಕೆಟಿ ಹೊಟೇಲ್‌ ರವಿವಾರ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಹಳೆಯ ಹೊಟೇಲ್‌ ನ ಹಿಂಭಾಗದಲ್ಲಿ ಹೊಸ ಕಟ್ಟಡ ನಿರ್ಮಾಣಗೊಂಡು ಬಳಿಕ ಅದರಲ್ಲಿ ಹೊಟೇಲ್‌ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next