Advertisement

ಬಿ.ಸಿ. ರೋಡ್‌-ಪುಂಜಾಲಕಟ್ಟೆ  ಹೆ. ಅಭಿವೃದ್ಧಿಗೆ 120 ಕೋ. ರೂ.

02:50 PM Feb 05, 2018 | Team Udayavani |

ಬಂಟ್ವಾಳ : ಪುರಸಭೆ ವ್ಯಾಪ್ತಿಯ ಬಿ.ಸಿ. ರೋಡ್‌ ಸರ್ಕಲ್‌ನಿಂದ ಜಕ್ರಿಬೆಟ್ಟುವರೆಗೆ ಕಾಂಕ್ರೀಟ್‌, ಅಲ್ಲಿಂದ ಪುಂಜಾಲಕಟ್ಟೆವರೆಗೆ 120 ಕೋ. ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೊಳಿಸಲಾಗುವುದು. ಕಾವಳಕಟ್ಟೆಯಲ್ಲಿ ಐಟಿಐ ಕಾಲೇಜು ಆರಂಭವಾಗಲಿದೆ. ಕೆಲವೇ ದಿನಗಳಲ್ಲಿ ಬಂಟ್ವಾಳದ ಆರ್‌ಟಿಒ ಕಚೇರಿ ಕಾರ್ಯಾರಂಭಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
                               
ಅವರು ಫೆ. 3ರಂದು ಬಂಟ್ವಾಳ ಪುರಸಭೆಯಲ್ಲಿ ಶೇ. 7.25ರ ಯೋಜನೆಯಡಿ ಪುರಸಭಾ ವ್ಯಾಪ್ತಿಯ 10ನೇ ತರಗತಿಗಿಂತ ಮೇಲ್ಪಟ್ಟ ತರಗತಿಗಳಲ್ಲಿ ಕಲಿಯುತ್ತಿರುವ 323 ಮಕ್ಕಳಿಗೆ ಪ್ರೋತ್ಸಾಹಧನ 3.25 ಲಕ್ಷ ರೂ. ವಿದ್ಯಾರ್ಥಿವೇತನ ಚೆಕ್‌ ವಿತರಿಸುವ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

Advertisement

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಮೊದಲ ಹಂತದಲ್ಲಿ ಕಾಲೇಜು ವ್ಯಾಸಂಗ ಮಾಡುತ್ತಿರುವ ಪ.ಜಾ., ಪಂ.ದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ಕಾಲೇಜುಗಳ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ಸರಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಬಂಟ್ವಾಳ ಸಮುದಾಯ ಆಸ್ಪತ್ರೆಯ ಕಾಮಗಾರಿ ಈ ಹಿಂದೆ ಆರಂಭಗೊಂಡಿದ್ದರೂ ಬಳಿಕ ನನೆಗುದಿಗೆ ಬಿದ್ದಿತ್ತು. ಅದನ್ನು ಸೂಕ್ತ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಿ ಸುಸಜ್ಜಿತ ಆಸ್ಪತ್ರೆಯಾಗಿ ಜನರ ಉಪಯೋಗಕ್ಕೆ ಒದಗಿಸಿದೆ. ಕೇವಲ ಗ್ರಾಮೀಣ ಮಾತ್ರವಲ್ಲ, ನಗರ ಪ್ರದೇಶದ ಅಭಿವೃದ್ಧಿಗೂ ಒತ್ತು ನೀಡಲಾಗಿದೆ ಎಂದರು.

ಸ್ಥಾಯೀ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಜಿ.ಪಂ. ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ ಉಪಸ್ಥಿತರಿದ್ದರು. ಪುರಸಭಾ ಉಪಾಧ್ಯಕ್ಷ ಮಹಮ್ಮದ್‌ ನಂದರಬೆಟ್ಟು ಸ್ವಾಗತಿಸಿದರು. ಮುಖ್ಯಾಧಿಕಾರಿ ರೇಖಾ ಶೆಟ್ಟಿ ಪ್ರಸ್ತಾವನೆ ನೀಡಿದರು. ಸಮುದಾಯ ಅಭಿವೃದ್ಧಿ ಸಂಘಟಕ ಮತ್ತಡಿ ವಂದಿಸಿದರು.

ನಿವೇಶನ ರಹಿತರಿಗೆ ನಿವೇಶನ: ಪ್ರಕ್ರಿಯೆಗೆ ಶೀಘ್ರ ಚಾಲನೆ
ಅಧ್ಯಕ್ಷತೆ ವಹಿಸಿದ್ದ ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಮಾತನಾಡಿ, ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ಸಚಿವರು ಕೋಟ್ಯಂತರ ರೂ.ಅನುದಾನ ಒದಗಿಸಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ನಿವೇಶನ
ರಹಿತರಿಗೆ ನಿವೇಶನ ಒದಗಿಸಲು ಪಲ್ಲಮಜಲು, ಬೋಳಂಗಡಿ ಪರಿಸರದಲ್ಲಿ ಜಮೀನು ಗುರುತಿಸಲಾಗಿದೆ. ತಿಂಗಳೊಳಗಾಗಿ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಫೆ. 7ರಂದು ಬಂಟ್ವಾಳ ಕಸಬಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next