Advertisement

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

08:09 PM Jun 30, 2024 | Team Udayavani |

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಜಯಿಸಿ ಎರಡನೇ ಬಾರಿಗೆ T20 ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ ಭರ್ಜರಿ ಬಹುಮಾನ ಘೋಷಿಸಿದೆ.

Advertisement

ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಬಹುಮಾನ ಘೋಷಿಸಿದ್ದಾರೆ. ”ಐಸಿಸಿ ಪುರುಷರ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬಂದಿಗೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

ರೋಚಕ ಹೋರಾಟದಲ್ಲಿ  ಜಯಿಸಿದ ಬಳಿಕ ಭಾರತದೆಲ್ಲೆಡೆ ಕ್ರಿಕೆಟ್ ಪ್ರೇಮಿಗಳು ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ. ತಂಡದ ಮೂವರು ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು ಗೆಲುವಿನ ಸಂಭ್ರಮಾಚರಣೆಯ ವೇಳೆಯಲ್ಲೇ T20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next