ಮುಂಬಯಿ: ಮಹಿಳೆಯರ ಏಷ್ಯಾಕಪ್ ಟೂರ್ನಿಗಾಗಿ ಶನಿವಾರ (ಜು.6ರಂದು) ಬಿಸಿಸಿಐ 15 ಮಂದಿಯ ಭಾರತ ತಂಡವನ್ನು ಪ್ರಕಟಿಸಿದೆ.
ಟಿ20 ಮಾದರಿಯಲ್ಲಿ ನಡೆಯಲಿರುವ ಏಷ್ಯಾಕಪ್ 9ನೇ ಆವೃತ್ತಿಯಲ್ಲಿ ಭಾರತ ತಂಡವನ್ನು ಹರ್ಮನ್ಪ್ರೀತ್ ಕೌರ್ ಹಿಂದಿನಂತೆಯೇ ಮುನ್ನೆಡಸಲಿದ್ದಾರೆ. ಅನುಭವಿ ಸ್ಮೃತಿ ಮಂಧಾನ, ದೀಪ್ತಿ ಶರ್ಮಾ ಎಂದಿನಂತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ ತಂಡದಲ್ಲಿದ್ದರೆ, ಅನುಭವಿ ವೇಗಿಗಳಾದ ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಅಮನ್ಜೋತ್ ಕೌರ್ ಮತ್ತು ಅನ್ ಕ್ಯಾಪ್ಡ್ ಯುವ ಆಟಗಾರ್ತಿ ಶಬ್ನಮ್ ಶಕೀಲ್ ಏಷ್ಯಾಕಪ್ ಸ್ಕ್ವಾಡ್ ನಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಯುವ ಆಟಗಾರ್ತಿಯರಾದ ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಏಷ್ಯಾಕಪ್ ತಂಡದ ಮೀಸಲು ಆಟಗಾರ್ತಿಯರಾಗಿದ್ದಾರೆ.
8ನೇ ಆವೃತ್ತಿಯಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿ ಏಷ್ಯಾಕಪ್ ನ್ನು ಮುಡಿಗೇರಿಸಿಕೊಂಡಿದ್ದ ಭಾರತ ಈ ಬಾರಿ ಜುಲೈ 19 ರಂದು ಪಾಕಿಸ್ತಾನದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದು, ಜುಲೈ 21 ಮತ್ತು 23 ರಂದು ಯುಎಇ ಮತ್ತು ನೇಪಾಳವನ್ನು ಎದುರಿಸಲಿದೆ.
ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ಕೀಪರ್), ಉಮಾ ಚೆಟ್ರಿ (ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ , ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸಜನಾ ಸಜೀವನ್
ಮೀಸಲು ಆಟಗಾರ್ತಿಯರು : ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್