Advertisement

ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ

10:18 AM Mar 27, 2023 | Team Udayavani |

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2022-23ರ ಋತುವಿಗಾಗಿ ‘ಕೇಂದ್ರ ಗುತ್ತಿಗೆ’ ಪಡೆದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

Advertisement

ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಅತ್ಯಂತ ದೊಡ್ಡ ಫಲಾನುಭವಿಯಾಗಿದ್ದಾರೆ. ಎಲ್ಲಾ ಮಾದರಿಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಜಡೇಜಾ ಅವರು A+ ಗುತ್ತಿಗೆಗೆ ಭಡ್ತಿ ನೀಡಲಾಗಿದೆ. ಇದೇ ವೇಳೆ ಕೆಎಲ್ ರಾಹುಲ್ A ನಿಂದ Bಗೆ ಕೆಳಗಿಳಿಯುವುದರೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ. ಇದರೊಂದಿಗೆ ಕೆಲವರು ಪಟ್ಟಿಯಿಂದ ಸಂಪೂರ್ಣವಾಗಿ ಹೊರ ಬಿದ್ದಿದ್ದಾರೆ.

ಭುವನೇಶ್ವರ್ ಕುಮಾರ್, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ವೃದ್ಧಿಮಾನ್ ಸಹಾ, ದೀಪಕ್ ಚಹಾರ್ ಮತ್ತು ಹನುಮ ವಿಹಾರಿ ಅವರಂತಹ ಆಟಗಾರರನ್ನು ಸಂಪೂರ್ಣವಾಗಿ ಒಪ್ಪಂದದಿಂದ ಹೊರಗಿಡಲಾಗಿದೆ. ಇವರಲ್ಲಿ ಸಹಾ, ಇಶಾಂತ್ ಮತ್ತು ರಹಾನೆ ಸದ್ಯ ಟೀಂ ಇಂಡಿಯಾದ ಯಾವುದೇ ಯೋಜನೆಯ ಭಾಗವಾಗಿಲ್ಲ. ಭುವನೇಶ್ವರ್ ಇತ್ತೀಚಿನ ದಿನಗಳಲ್ಲಿ ಕೆಲವು ಸೀಮಿತ-ಓವರ್‌ಗಳ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ:“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

ದೀಪಕ್ ಹೂಡಾ, ಕೆಎಸ್ ಭರತ್ ಮತ್ತು ಅರ್ಷದೀಪ್ ಸಿಂಗ್ ಗ್ರೇಡ್ ಸಿ ವಿಭಾಗದಲ್ಲಿ ಸೇರ್ಪಡೆಯಾಗಿದ್ದಾರೆ. ಸದ್ಯ ಯಾವುದೇ ತಂಡದಲ್ಲಿ ಸ್ಥಾನ ಪಡೆಯದ ಶಿಖರ್ ಧವನ್ ಅವರು ಇನ್ನೂ ಗುತ್ತಿಗೆಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Advertisement

ಬಿಸಿಸಿಐ ಕೇಂದ್ರ ಒಪ್ಪಂದಗಳ ಪಟ್ಟಿ

ಗ್ರೇಡ್ ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

ಗ್ರೇಡ್ ಎ: ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಬ್ ಪಂತ್, ಅಕ್ಷರ್ ಪಟೇಲ್.

ಗ್ರೇಡ್ ಬಿ: ಚೇತೇಶ್ವರ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್

ಗ್ರೇಡ್ ಸಿ: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

Advertisement

Udayavani is now on Telegram. Click here to join our channel and stay updated with the latest news.

Next