Advertisement

INDvsSA; ಬಿಸಿಸಿಐ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದ ಕೋಲ್ಕತ್ತಾ ಪೊಲೀಸರು

05:18 PM Nov 05, 2023 | Team Udayavani |

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್‌ ನಲ್ಲಿ ಭಾನುವಾರ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್‌ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ನಡುವೆ, ಕೋಲ್ಕತ್ತಾ ಪೊಲೀಸರು ಈವೆಂಟ್‌ ನ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಶನಿವಾರ ಸಂಜೆ ಹೊರಡಿಸಲಾದ ನೋಟಿಸ್‌ ನಲ್ಲಿ, ಟಿಕೆಟ್‌ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಕುರಿತು ದೂರುಗಳ ತನಿಖೆ ನಡೆಸುತ್ತಿರುವ ಮೈದಾನ ಪೊಲೀಸ್ ಠಾಣೆಯ ಅಧಿಕಾರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಮಂಗಳವಾರದೊಳಗೆ ಮೈದಾನ ಠಾಣೆಯ ತನಿಖಾಧಿಕಾರಿಗೆ ವೈಯಕ್ತಿಕವಾಗಿ ಅಥವಾ ಅವರ ಸಂಸ್ಥೆಯ ಯಾವುದೇ ಸಮರ್ಥ ವ್ಯಕ್ತಿಯ ಮೂಲಕ ಟಿಕೆಟ್‌ಗಳ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋಲ್ಕತ್ತಾ ಪೊಲೀಸರು ಇಲ್ಲಿಯವರೆಗೆ 19 ಜನರನ್ನು ಬಂಧಿಸಿದ್ದಾರೆ ಮತ್ತು ಅವರ ವಶದಿಂದ 108 ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಟಿಕೆಟ್‌ಗಳ ಬ್ಲ್ಯಾಕ್ ಮಾರ್ಕೆಟಿಂಗ್‌ ಗೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next