ಮುಂಬೈ: ಭಾರತ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ನೇಮಕವಾಗಿದ್ದಾರೆ ಎಂಬ ಸುದ್ದಿಗಳ ನಡುವೆ ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದ್ದು, ಭಾರತ ಪುರುಷರ ತಂಡ ಮತ್ತು ಎನ್ ಸಿಎ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಭಾರತ ಪುರುಷರ ತಂಡದ ಮುಖ್ಯ ಕೋಚ್, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡಮೆ (ಎನ್ ಸಿಎ) ಮುಖ್ಯ ಸ್ಪೋರ್ಟ್ಸ್ ಸೈಯನ್ಸ್/ ಮೆಡಿಸಿನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅ.26ರ ಸಂಜೆ 5 ಗಂಟೆಯೊಳಗೆ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಕೇಳಲಾಗಿದೆ. ಟಿ20 ವಿಶ್ವಕಪ್ ಬಳಿಕ ಕೋಚ್ ರವಿ ಶಾಸ್ತ್ರಿ ಅವರ ಕೋಚಿಂಗ್ ಅವಧಿ ಅಂತ್ಯವಾಗಲಿದೆ.
ಇದನ್ನೂ ಓದಿ:8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ
ರಾಹುಲ್ ದ್ರಾವಿಡ್ ಅವರು ಭಾರತೀಯ ಪುರುಷರ ತಂಡ ಕೋಚ್ ಆಗಲು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರೊಂದಿಗೆ ನಡೆದ ಚರ್ಚೆಯ ಬಳಿಕ ದ್ರಾವಿಡ್ ಅವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದೀಗ ಬಿಸಿಸಿಐ ಅಧಿಕೃತವಾಗಿ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.