ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಟಿಐ ಮತ್ತು ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸೌರವ್ ಗಂಗೂಲಿಯವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಗಂಗೂಲಿ ಆಪ್ತ ಮೂಲಗಳು ಹೇಳಿದ್ದಾರೆ.
ಇದನ್ನೂ ಓದಿ:ಸೋತಿರುವ ಆಸೀಸ್ ಗೆ ಮತ್ತೊಂದು ಆಘಾತ: ಮೂರನೇ ಪಂದ್ಯದಲ್ಲಿ ಪ್ರಮುಖ ಆಟಗಾರ ಆಡುವುದು ಡೌಟ್!
48 ವರ್ಷದ ಸೌರವ್ ಅವರು ಕಳೆದ ಬುಧವಾರವಷ್ಟೇ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನಕ್ಕೆ ಭೇಟಿ ನೀಡಿದ್ದರು. ಮುಂಬರುವ ಸಯ್ಯದ್ ಮುಶ್ತಾಕ್ ಅಲಿ ಟೂರ್ನಿಯ ಸಿದ್ದತೆ ಪರಿಶೀಲನೆಗಾಗಿ ಬೆಂಗಾಲ್ ಕ್ರಿಕೆಟ್ ಅಸೋಸಿಯೇನ್ ಅಧ್ಯಕ್ಷ ಅವಿಶೇಕ್ ಡಾಲ್ಮಿಯಾ ಜೊತೆ ಈಡನ್ ಗಾರ್ಡನ್ ಮೈದಾನಕ್ಕೆ ಭೇಟಿ ನೀಡಿದ್ದರು.