Advertisement

ಈ ಬಾರಿ ಭಾರತದಲ್ಲಿಯೇ ಐಪಿಎಲ್‌: ಜಯ್‌ ಶಾ

07:53 PM Nov 21, 2021 | Team Udayavani |

ಹೊಸದಿಲ್ಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ ಲೀಗ್‌ ಐಪಿಎಲ್‌ 2022ರ ಟೂರ್ನಿಗೆ ಕಾಯುತ್ತಿರುವ ಅಭಿಮಾನಿಗಳಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಗುಡ್‌ ನ್ಯೂಸ್‌ ಒಂದನ್ನು ನೀಡಿದ್ದು ಮುಂದಿನ ವರ್ಷ ಭಾರತದಲ್ಲಿಯೇ ಐಪಿಎಲ್‌ ಆಯೋಜಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ.

Advertisement

15ನೇ ಆವೃತ್ತಿಯ ಐಪಿಎಲ್‌ ಭಾರತದಲ್ಲೇ ನಡೆಯಲಿದೆ. ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಟೂರ್ನಿಯು ಮತ್ತಷ್ಟು ರೋಚಕವಾಗಿರಲಿದೆ.

ಮೆಗಾ ಹರಾಜು ಸದ್ಯದಲ್ಲೇ ನಡೆಯಲಿದ್ದು, ಹೊಸ ತಂಡಗಳು ಹೇಗಿರಲಿವೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಜಯ್‌ ಶಾ ತಿಳಿಸಿದರು.

ಇದನ್ನೂ ಓದಿ:ಚೊಚ್ಚಲ ಪಂದ್ಯದಲ್ಲೇ ಹೆಲ್ಮೆಟ್‌ಗೆ ಬಡಿದ ಚೆಂಡು, ಆಸ್ಪತ್ರೆಗೆ ದಾಖಲಾದ ವಿಂಡೀಸ್‌ ಆಟಗಾರ

Advertisement

Udayavani is now on Telegram. Click here to join our channel and stay updated with the latest news.

Next