Advertisement

ಬಿಡಿಎ ಆಯುಕ್ತ ರಾಜೇಶ್‌ ಗೌಡ ವರ್ಗಾವಣೆ; ಸುಪ್ರೀಂ ಕೋರ್ಟ್‌ ನಿರ್ದೇಶನದ ಬೆನ್ನಲ್ಲೇ ಈ ಕ್ರಮ

09:14 PM Aug 26, 2022 | Team Udayavani |

ಬೆಂಗಳೂರು: ಸುಪ್ರೀಂ ಕೋರ್ಟ್‌ ಖಡಕ್‌ ಆದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಬಿಡಿಎ ಆಯುಕ್ತರಾಗಿದ್ದ ರಾಜೇಶ್‌ ಗೌಡ ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

Advertisement

ಅವರ ಜಾಗಕ್ಕೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯ್ಕ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಆದರೆ, ರಾಜೇಶ್‌ ಗೌಡ ಅವರಿಗೆ ಸ್ಥಳ ಸೂಚಿಸಿಲ್ಲ. ಇದೇ ವೇಳೆ, ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂ ಸಿ ಹಂಚಿಕೆ ಮಾಡಲಾಗಿರುವ ಬದಲಿ ನಿವೇಶನಗಳನ್ನು ಹಿಂಪಡೆದು, ನಿಯಮದಂತೆ ಮತ್ತೆ ನಿವೇಶನ ಹಂಚಿಕೆ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

ಭೂಸ್ವಾಧೀನ ಮಾಡಿಕೊಳ್ಳದ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಾಡಿ ನಂತರ ಅದಕ್ಕೆ ಬದಲಾಗಿ ಬೇರೆಡೆ ನಿವೇಶನ ನೀಡುವ ವೇಳೆ ಹೊಸದಾಗಿ ಅಭಿವೃದ್ಧಿಯಾಗಿರುವ ಲೇಔಟ್‌ಗಳಲ್ಲಿ ನಿವೇಶನ ನೀಡುವಂತೆ ಸುಪ್ರೀಂಕೋರ್ಟ್‌ 2021ರ ಅಕ್ಟೋಬರ್‌ನಲ್ಲಿ ಆದೇಶಿಸಿದೆ. ಆದರೆ, ಈ ಆದೇಶ ಉಲ್ಲಂ ಸಿರುವ ಬಿಡಿಎ ಅಧಿಕಾರಿಗಳು 2021ರ ಡಿಸೆಂಬರ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದೆ.

ಅಧಿಕಾರಿಗಳ ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌ ಗುರುವಾರ, ಬಿಡಿಎ ಆಯುಕ್ತರ ವರ್ಗಾವಣೆಗೆ ಮೌಖಿಕವಾಗಿ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next