ಬೆಂಗಳೂರು: ಬಿಜೆಪಿ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಬಿಡಿಎ ಭ್ರಷ್ಟಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಡಿಎ ಕಚೇರಿ ಮೆಲಿನ ದಾಳಿ ಸಂಬಂಧ ಎಸಿಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಒಂದು ಸದುದ್ದೇಶದೊಂದಿಗೆ ಇರುವ ಸಂಸ್ಥೆ. ಅದಲ್ಲಿ ಭ್ರಷ್ಟಾಚಾರ ಸಹಿಸಲ್ಲ, ಅಕ್ರಮದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ಶ್ವಾನದ ಹೆಸರಲ್ಲಿದೆ 3 ಸಾವಿರ ಕೋಟಿ ರೂ. ಬಂಗಲೆ
ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಎಸ್.ಆರ್.ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅಧಿಕಾರಿಗಳಿರಲಿ , ಅವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ಬಿಡಿಎ ಸ್ವಚ್ಛ ಗೊಳಿಸಬೇಕು ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ದೊರಕಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛ ಗೊಳಿಸಬೇಕಿದೆ ಎಂದು ತಿಳಿಸಿದರು.