Advertisement
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಈಗಾಗಲೇ ಬಿಡಿಎ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿದೆ. ಪೊಲೀಸ್ ಇಲಾಖೆ ಬಿಡಿಎಯಿಂದ ಸುಮಾರು 2ಸಾವಿರ ಅಪಾರ್ಟ್‌ಮೆಂಟ್‌ಗಳನ್ನು ಖರೀದಿಸಲು ಆಲೋಚನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಕೂಡ ಈಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಳಿಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಬಿಡಿಎ ನಿರ್ಮಿಸಿರುವ ವಸತಿ ಸಮುತ್ಛಯಗಳ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಪಾರ್ಟ್‌ಮೆಂಟ್ ಖರೀದಿ ಕುರಿತಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಬಿಡಿಎ ಆಯುಕ್ತ ರಾಕೇಶ್ ಸಿಂಗ್, ಹಿರಿಯ ಪೊಲೀಸ್ ಅಧಿಕಾರಿ ಕಿಶೋರ್‌ಚಂದ್ರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಜತೆ ಕೆಲವು ಸುತ್ತುಗಳ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲೆ, ಮತ್ತೂಂದು ಸುತ್ತಿನ ಮಾತುಕತೆ ನಡೆಯಲಿದ್ದು ಅಲಿ, ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಬಿಡಿಎನ ಹಿರಿಯ ಅಧಿಕಾರಿಗಳು ಉದಯವಾಣಿಗೆ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ ಅಪಾರ್ಟ್‌ಮೆಂಟ್?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಕಣಮಿಣಿಕೆ, ಕೋಮಘಟ್ಟ, ದೊಡ್ಡಬನಹಳ್ಳಿ, ವಡೇರಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿದ್ದು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕಣಮಿಣಿಕೆ, ಕೋಮಘಟ್ಟ, ದೊಡ್ಡಬನ ಹಳ್ಳಿ ಸೈಟ್‌ಗಳಿಗೆ ಭೇಟಿ ನೀಡಿದ್ದಾರೆ. ಪೊಲೀಸ್ ಇಲಾಖೆ ಒಂದೇ ಕಡೆ ಬ್ಲಾಕ್ ನೀಡಿ ಎಂದು ಕೇಳಿಕೊಂಡಿದೆ.
Related Articles
Advertisement
ಸೈಟ್‌ಗಳಿಗೆ ಬೆಲೆ ಎಷ್ಟು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿ ರುವ ಅಪಾರ್ಟ್‌ಮೆಂಟ್‌ಗಳ ಬೆಲೆ ಒಂದೊಂದುಕಡೆ ಒಂದೊಂದು ರೀತಿಯಲ್ಲಿ ಇದೆ. ಹೀಗಾಗಿ ಸಾರ್ವಜನಿಕರಿಂದ ಎಷ್ಟು ಹಣವನ್ನು ಪಡೆಯಲಾ ಗುತ್ತದೆಯೋ,ಅಷ್ಟೇ ಮಟ್ಟದ ಹಣವನ್ನು ಬಿಡಿಎ ಪೊಲೀಸ್ ಇಲಾಖೆಯಿಂದ ಪಡೆಯಲಿದೆ. ಬಿಡಿಎ ನಿರ್ಮಿಸಿರುವ ಅಪಾರ್ಟ್ ಮೆಂಟ್‌ಗಳನ್ನು ತನ್ನ ಸಿಬ್ಬಂದಿಗಾಗಿ ಪೊಲೀಸ್ ಇಲಾಖೆ ಖರೀದಿಸುವ ಆಲೋಚನೆ ಮಾಡಿದೆ. ಈ ಬಗ್ಗೆ ಗೃಹ ಸಚಿವರು ಹಾಗೂ ಬಿಡಿಎ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ರಾಕೇಶ್ ಸಿಂಗ್, ಬಿಡಿಎ ಆಯುಕ್ತ ದೇವೇಶ ಸೂರಗುಪ್ಪ