ಶಿರ್ವ: ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಮೌಲ್ಯ, ನಡವಳಿಕೆ ಮತ್ತು ವಿಚಾರಧಾರೆಯಿರುವ ಸ್ನೇಹಿತರನ್ನು ಸಂಪಾದಿಸಿಕೊಂಡು ಜ್ಞಾನ ಸಂಪಾದಿಸಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು.
ವಿದ್ಯಾರ್ಜನೆಯೊಂದಿಗೆ ಚಿಂತನೆ, ನಂಬಿಕೆ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಜೀವನದಲ್ಲಿ ಧ್ಯೇಯವಿರಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಉಡುಪಿ ಡಯಾಸಿಸ್‌ನ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ರೆ|ಫಾ| ವಿನ್ಸೆಂಟ್‌ಆರ್. ಕ್ರಾಸ್ತಾ ಹೇಳಿದರು.
ಅವರು ಸೋಮವಾರ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಮೇರಿ ಮತ್ತು ಡಾನ್ ಬೋಸ್ಕೊ ಸಮೂಹ ಸಂಸ್ಥೆಗಳ ಸಂಚಾಲಕರಾದ ರೆ|ಫಾ|ಡೆನ್ನಿಸ್ ಡೇಸಾ ಮಾತನಾಡಿ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡು ವಿದ್ಯಾಸಂಸ್ಥೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆಡಹುವುದರ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳ ಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪೊ| ರಾಜನ್‌ವಿ.ಎನ್., ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಉಪನ್ಯಾಸಕ ಮೆಲ್ವಿನ್ ಲೋಬೊ ಅತಿಥಿಗಳ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್‌ನ ಸಹಾಯಕ ಧರ್ಮಗುರು ರೆ|ಫಾ| ಅಶ್ವಿನ್ ಅರಾನ್ಹಾ,ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಿಲ್ಸನ್ ಡಿ‡ ಸೋಜಾ, ಹಿರಿಯ ಉಪನ್ಯಾಸಕ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ| ವಿಠಲ ನಾಯಕ್, ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ಪ್ರಸಾದ್ .ಜಿ ಮತ್ತು ಶ್ರುತಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ನಿವೃತ್ತ ಉಪನ್ಯಾಸಕ ಪೊ|ರೊನಾಲ್ಡ್ ಮೊರಾಸ್, ಕಾಲೇಜಿನ ಅಧ್ಯಾಪಕ ವೃಂದ ,ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿ ಸಂಘದ ಅಧ್ಯಕ್ಷ ಬ್ರಾನ್ಸನ್‌ವಿಲ್ಫೆ†ಡ್ ಮೋನಿಸ್ ಸ್ವಾಗತಿಸಿದರು. ಸೋನಿಶಾ ಮರ್ಲಿನ್ ಮತಾಯಸ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸುಪ್ರೀತಾ ಎಸ್.ಶೆಟ್ಟಿ, ವಂದಿಸಿದರು.